೧ |
ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II |
೨ |
ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II |
೩ |
ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II |
೪ |
ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II |
೫ |
ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II |
೬ |
ತನ್ನ ಪ್ರಜೆಗಿತ್ತಿಹನು ಅನ್ಯಜನರ ಸೊತ್ತನು I ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು II |
೭ |
ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II |
೮ |
ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II |
೯ |
ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II |
೧೦ |
ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II
|
Kannada Bible (KNCL) 2016 |
No Data |