೧ |
(ಯಾತ್ರಾಗೀತೆ) ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ: “ನನಗೆ ಒತ್ತಾಸೆ ಎತ್ತಣಿಂದ?” II |
೨ |
ನನಗೆ ಒತ್ತಾಸೆ ಪ್ರಭುವಿನಿಂದ I ಭೂಮ್ಯಾಕಾಶ ಸೃಜಿಸಿದವನಿಂದ II |
೩ |
ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II |
೪ |
ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II |
೫ |
ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II |
೬ |
ನಿನ್ನ ಬಾಧಿಸನು ಸೂರ್ಯನು ಹಗಲೊಳು I ನಿನ್ನ ಪೀಡಿಸನು ಚಂದ್ರನು ಇರುಳೊಳು II |
೭ |
ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II |
೮ |
ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II
|
Kannada Bible (KNCL) 2016 |
No Data |