೧ |
(ಯಾತ್ರಾಗೀತೆ) ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II |
೨ |
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II |
೩ |
ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II |
೪ |
ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II |
೫ |
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II |
೬ |
ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II
|
Kannada Bible (KNCL) 2016 |
No Data |