೧ |
ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II |
೨ |
ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II |
೩ |
ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II |
೪ |
ತಾನು ಜಯಗಳಿಸಿದೆನೆಂದು ಶತ್ರು ಹೇಳಿಕೊಳ್ಳದಿರಲಿ I ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ II |
೫ |
ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II |
೬ |
ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II
|
Kannada Bible (KNCL) 2016 |
No Data |