೧ |
(ಯಾತ್ರಾಗೀತೆ) ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I |
೨ |
ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II |
೩ |
ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II |
೪ |
ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II |
೫ |
ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II |
೬ |
ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II |
೭ |
ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II |
೮ |
ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II
|
Kannada Bible (KNCL) 2016 |
No Data |