೧ |
ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II |
೨ |
“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II |
೩ |
ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II |
೪ |
ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II |
೫ |
ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II |
೬ |
ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II |
೭ |
ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II |
೮ |
ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II
|
Kannada Bible (KNCL) 2016 |
No Data |