೧ |
ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II |
೨ |
ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I |
೩ |
“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II |
೪ |
ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II |
೫ |
ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II
|
Kannada Bible (KNCL) 2016 |
No Data |