A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಕೀರ್ತನೆಗಳು ೮೭



ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II
ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು: II
“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II
ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II
ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II