೧ |
“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು. |
೨ |
ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು. |
೩ |
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. |
೪ |
ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು. |
೫ |
ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. |
೬ |
ಪೀಠವನ್ನು ಹೊರುವ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಬೇಕು. |
೭ |
ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು. |
೮ |
ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು. |
೯ |
“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು. |
೧೦ |
ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು. |
೧೧ |
ಅದೇ ರೀತಿ ಉತ್ತರ ಕಡೆಯಲ್ಲೂ ನೂರು ಮೊಳ ಉದ್ದದ ತೆರೆಗಳು, ಇಪ್ಪತ್ತು ಕಂಬಗಳು ಹಾಗು ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದವಾಗಿರಬೇಕು. |
೧೨ |
ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳು, ಹತ್ತು ಕಂಬಗಳು ಹಾಗು ಹತ್ತು ಗದ್ದಿಗೇ ಕಲ್ಲುಗಳು ಇರಬೇಕು. |
೧೩ |
ಪೂರ್ವ ದಿಕ್ಕಿನಲ್ಲೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. |
೧೪ |
ಅಲ್ಲೆ ಬಾಗಿಲಿನ ಎರಡು ಕಡೆಗಳಲ್ಲೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇ ಕಲ್ಲುಗಳೂ ಇರಬೇಕು. |
೧೫ |
*** |
೧೬ |
ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು. |
೧೭ |
ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು. |
೧೮ |
ಅಂಗಳವು ಮೂರು ಮೊಳ ಉದ್ದ ಹಾಗು ಐವತ್ತು ಮೊಳ ಅಗಲವಿರಬೇಕು. ಅದಕ್ಕೆ ಅದರ ಸುತ್ತಲಿರುವ ಪರದೆ ಹುರಿನಾರಿನ ಬಟ್ಟೆಯಿಂದ ಮಾಡಿದ್ದಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇ ಕಲ್ಲುಗಳು ತಾಮ್ರದವುಗಳಾಗಿರಬೇಕು. |
೧೯ |
ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು. |
೨೦ |
“ಆ ದೀಪವು ಯಾವಾಗಲೂ ಉರಿಯುತ್ತಿರಬೇಕು. ಅದಕ್ಕೆ ಎಣ್ಣೇ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಇಸ್ರಯೇಲರಿಗೆ ಅಪ್ಪಣೆ ಮಾಡು. |
೨೧ |
ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.
|
Kannada Bible (KNCL) 2016 |
No Data |