೧ |
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. |
೨ |
ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು. |
೩ |
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು. |
೪ |
ಮತ್ತು ಜಾಲೀಮರದ ಗದ್ದುಗೆಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ |
೫ |
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು. |
೬ |
ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು. |
೭ |
ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು. |
೮ |
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು. |
೯ |
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು. |
೧೦ |
ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು. |
೧೧ |
ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು. |
೧೨ |
ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು. |
೧೩ |
ಮೇಜನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು. |
೧೪ |
ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು. |
೧೫ |
ಮೇಜನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. |
೧೬ |
ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು. |
೧೭ |
ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು. |
೧೮ |
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು, ಅಂತೂ ಆರು ಕೊಂಬೆಗಳಿದ್ದವು. |
೧೯ |
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು. |
೨೦ |
ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು. |
೨೧ |
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು. |
22 |
ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು. |
23 |
ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು. |
24 |
ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು. |
25 |
ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು. |
26 |
ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು. |
27 |
ಅದನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಆ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು. |
28 |
ವೇದಿಕೆಯನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. |
29 |
ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.
|
Italian Bible NR 1994 |
Copyright © 1994 Società Biblica di Ginevra |