೧ |
ಸರ್ವೇಶ್ವರ ಸ್ವಾಮಿ ಮೋಶೆಗೆ: |
೨ |
“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು. |
೩ |
ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು. |
೪ |
ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು. |
೫ |
ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು. |
೬ |
ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು. |
೭ |
ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು. |
೮ |
ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು. |
೯ |
ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು. |
೧೦ |
ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು. |
೧೧ |
ನೀರು ತೊಟ್ಟಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. |
೧೨ |
“ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು. |
೧೩ |
ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು. |
೧೪ |
ಅನಂತರ ಅವನ ಮಕ್ಕಳನ್ನು ಬರಮಾಡು. |
೧೫ |
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು. |
೧೬ |
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. |
೧೭ |
ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. |
೧೮ |
ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. |
೧೯ |
ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು. |
೨೦ |
ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು, |
೨೧ |
ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. |
೨೨ |
ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು |
೨೩ |
ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು. |
೨೪ |
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು |
೨೫ |
ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. |
೨೬ |
ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು |
೨೭ |
ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು; |
೨೮ |
ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು. |
೨೯ |
ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. |
೩೦ |
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು. |
೩೧ |
ಅದರಲ್ಲಿ ಮೋಶೆಯೂ |
೩೨ |
ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು. |
೩೩ |
ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. |
೩೪ |
ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು. |
೩೫ |
ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. |
೩೬ |
ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. |
೩೭ |
ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು. |
೩೮ |
ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.
|
Kannada Bible (KNCL) 2016 |
No Data |