A A A A A
×

ಕನ್ನಡ ಬೈಬಲ್ (KNCL) 2016

ಉಪದೇಷಕ ೨

“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.
“ನಗೆ ಹುಚ್ಚುತನ, ಸುಖಭೋಗ ನಿಷ್ಪ್ರಯೋಜಕ” ಎಂದುಕೊಂಡೆ.
ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.
ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;
ತೋಟ ಉದ್ಯಾನವನಗಳನ್ನು ಬೆಳೆಸಿದೆ. ಅವುಗಳಲ್ಲಿ ನಾನಾ ತರದ ಫಲವೃಕ್ಷಗಳನ್ನು ನಾಟಿಮಾಡಿಸಿದೆ.
ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.
ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.
ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.
ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.
೧೦
ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.
೧೧
ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.
೧೨
ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಜ್ಞಾನವೆಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳ ಬಗ್ಗೆ ಮತ್ತೆ ಚಿಂತಿಸಿದೆ.
೧೩
ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.
೧೪
“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ\. ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.
೧೫
“ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.
೧೬
ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.
೧೭
ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!
೧೮
ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.
೧೯
ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.
೨೦
ಹೀಗಿರಲು, ನಾನು ಲೋಕದಲ್ಲಿ ಕಷ್ಟಪಟ್ಟು ಗಳಿಸಿದ ದುಡಿಮೆಯ ಬಗ್ಗೆ ನಿರಾಶೆಗೊಂಡೆ.
೨೧
ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?
೨೨
ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
೨೩
ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.
೨೪
ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.
೨೫
ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?
೨೬
ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.
ಉಪದೇಷಕ ೨:1
ಉಪದೇಷಕ ೨:2
ಉಪದೇಷಕ ೨:3
ಉಪದೇಷಕ ೨:4
ಉಪದೇಷಕ ೨:5
ಉಪದೇಷಕ ೨:6
ಉಪದೇಷಕ ೨:7
ಉಪದೇಷಕ ೨:8
ಉಪದೇಷಕ ೨:9
ಉಪದೇಷಕ ೨:10
ಉಪದೇಷಕ ೨:11
ಉಪದೇಷಕ ೨:12
ಉಪದೇಷಕ ೨:13
ಉಪದೇಷಕ ೨:14
ಉಪದೇಷಕ ೨:15
ಉಪದೇಷಕ ೨:16
ಉಪದೇಷಕ ೨:17
ಉಪದೇಷಕ ೨:18
ಉಪದೇಷಕ ೨:19
ಉಪದೇಷಕ ೨:20
ಉಪದೇಷಕ ೨:21
ಉಪದೇಷಕ ೨:22
ಉಪದೇಷಕ ೨:23
ಉಪದೇಷಕ ೨:24
ಉಪದೇಷಕ ೨:25
ಉಪದೇಷಕ ೨:26
ಉಪದೇಷಕ 1 / ಉಪದ 1
ಉಪದೇಷಕ 2 / ಉಪದ 2
ಉಪದೇಷಕ 3 / ಉಪದ 3
ಉಪದೇಷಕ 4 / ಉಪದ 4
ಉಪದೇಷಕ 5 / ಉಪದ 5
ಉಪದೇಷಕ 6 / ಉಪದ 6
ಉಪದೇಷಕ 7 / ಉಪದ 7
ಉಪದೇಷಕ 8 / ಉಪದ 8
ಉಪದೇಷಕ 9 / ಉಪದ 9
ಉಪದೇಷಕ 10 / ಉಪದ 10
ಉಪದೇಷಕ 11 / ಉಪದ 11
ಉಪದೇಷಕ 12 / ಉಪದ 12