೧ |
ಮಹಿಳೆಯರು: ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ: |
೨ |
ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ. |
೩ |
ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ: |
೪ |
ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ. |
೫ |
ತಿರುಗಿಸು ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ನನ್ನ ಸೆರೆಹಿಡಿದು ಬಿಡುವವು ತಮ್ಮ ನೋಟದಿಂದ. ನಿನ್ನ ಕೇಶರಾಶಿಯ ನರ್ತನ ಗಿಲ್ಯಾದ್ ಗುಡ್ಡದಿಂದ ಇಳಿಯುವ ಆಡುಮಂದೆಗೆ ಸಮಾನ. |
೬ |
ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ. |
೭ |
ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ. |
೮ |
ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ. |
೯ |
ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ: |
೧೦ |
“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ? |
೧೧ |
ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ. |
೧೨ |
ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ. |
೧೩ |
ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ! ನಲ್ಲೆ: ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ?
|
Kannada Bible (KNCL) 2016 |
No Data |