೧ |
ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ! |
೨ |
ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ. |
೩ |
ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ: ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ, |
೪ |
ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.” |
೫ |
ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು. |
೬ |
ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು. |
೭ |
ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು. |
Kannada Bible (KNCL) 2016 |
No Data |
ಯೆಶಾಯನ ೧೮:1 |
ಯೆಶಾಯನ ೧೮:2 |
ಯೆಶಾಯನ ೧೮:3 |
ಯೆಶಾಯನ ೧೮:4 |
ಯೆಶಾಯನ ೧೮:5 |
ಯೆಶಾಯನ ೧೮:6 |
ಯೆಶಾಯನ ೧೮:7 |
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |
|
|
|
|
|