೧ |
ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು. |
೨ |
ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು. |
೩ |
ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು. |
೪ |
ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: “ನಿನ್ನ ಭರವಸೆಗೆ ಆಧಾರವಾದರೂ ಏನು? |
೫ |
ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ? |
೬ |
ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ. |
೭ |
‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ? |
೮ |
ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ? |
೯ |
ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ. |
೧೦ |
ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು. |
೧೧ |
ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು. |
೧೨ |
ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು. |
೧೩ |
ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ; |
೧೪ |
ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು. |
೧೫ |
ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ. |
೧೬ |
ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು. |
೧೭ |
ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; |
೧೮ |
‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ? |
೧೯ |
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ? |
೨೦ |
ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು. |
೨೧ |
ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು. |
೨೨ |
ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಶಾಯನ ೩೬:1 |
ಯೆಶಾಯನ ೩೬:2 |
ಯೆಶಾಯನ ೩೬:3 |
ಯೆಶಾಯನ ೩೬:4 |
ಯೆಶಾಯನ ೩೬:5 |
ಯೆಶಾಯನ ೩೬:6 |
ಯೆಶಾಯನ ೩೬:7 |
ಯೆಶಾಯನ ೩೬:8 |
ಯೆಶಾಯನ ೩೬:9 |
ಯೆಶಾಯನ ೩೬:10 |
ಯೆಶಾಯನ ೩೬:11 |
ಯೆಶಾಯನ ೩೬:12 |
ಯೆಶಾಯನ ೩೬:13 |
ಯೆಶಾಯನ ೩೬:14 |
ಯೆಶಾಯನ ೩೬:15 |
ಯೆಶಾಯನ ೩೬:16 |
ಯೆಶಾಯನ ೩೬:17 |
ಯೆಶಾಯನ ೩೬:18 |
ಯೆಶಾಯನ ೩೬:19 |
ಯೆಶಾಯನ ೩೬:20 |
ಯೆಶಾಯನ ೩೬:21 |
ಯೆಶಾಯನ ೩೬:22 |
|
|
|
|
|
|
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |