೧ |
ನಿಮ್ಮ ದೇವರು ಇಂತೆನ್ನುತ್ತಾರೆ: “ಸಂತೈಸಿ, ನನ್ನ ಜನರನ್ನು ಸಂತೈಸಿರಿ. |
೨ |
ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.” |
೩ |
ಇಗೋ, ಈ ವಾಣಿಯನ್ನು ಕೇಳಿ: “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ. |
೪ |
ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು. |
೫ |
ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.” |
೬ |
ಆ ವಾಣಿ ಮತ್ತೆ ಕೇಳಿಸಿತು: ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು: “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ. |
೭ |
ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು. |
೮ |
ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.” |
೯ |
ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು. |
೧೦ |
ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ. |
೧೧ |
ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ. |
೧೨ |
ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ? |
೧೩ |
ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ? |
೧೪ |
ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ? |
೧೫ |
ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು. |
೧೬ |
ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ. |
೧೭ |
ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ. |
೧೮ |
ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು? |
೧೯ |
ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ. |
೨೦ |
ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು. |
೨೧ |
ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ? |
೨೨ |
ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ. |
೨೩ |
ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು. |
೨೪ |
ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ. |
೨೫ |
“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ. |
೨೬ |
ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ |
೨೭ |
ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ? |
೨೮ |
ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ. |
೨೯ |
ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. |
೩೦ |
ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. |
೩೧ |
ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಶಾಯನ ೪೦:1 |
ಯೆಶಾಯನ ೪೦:2 |
ಯೆಶಾಯನ ೪೦:3 |
ಯೆಶಾಯನ ೪೦:4 |
ಯೆಶಾಯನ ೪೦:5 |
ಯೆಶಾಯನ ೪೦:6 |
ಯೆಶಾಯನ ೪೦:7 |
ಯೆಶಾಯನ ೪೦:8 |
ಯೆಶಾಯನ ೪೦:9 |
ಯೆಶಾಯನ ೪೦:10 |
ಯೆಶಾಯನ ೪೦:11 |
ಯೆಶಾಯನ ೪೦:12 |
ಯೆಶಾಯನ ೪೦:13 |
ಯೆಶಾಯನ ೪೦:14 |
ಯೆಶಾಯನ ೪೦:15 |
ಯೆಶಾಯನ ೪೦:16 |
ಯೆಶಾಯನ ೪೦:17 |
ಯೆಶಾಯನ ೪೦:18 |
ಯೆಶಾಯನ ೪೦:19 |
ಯೆಶಾಯನ ೪೦:20 |
ಯೆಶಾಯನ ೪೦:21 |
ಯೆಶಾಯನ ೪೦:22 |
ಯೆಶಾಯನ ೪೦:23 |
ಯೆಶಾಯನ ೪೦:24 |
ಯೆಶಾಯನ ೪೦:25 |
ಯೆಶಾಯನ ೪೦:26 |
ಯೆಶಾಯನ ೪೦:27 |
ಯೆಶಾಯನ ೪೦:28 |
ಯೆಶಾಯನ ೪೦:29 |
ಯೆಶಾಯನ ೪೦:30 |
ಯೆಶಾಯನ ೪೦:31 |
|
|
|
|
|
|
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |