೧ |
“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ: ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ. |
೨ |
ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು. |
೩ |
ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ. |
೪ |
ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ: ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ. |
೫ |
ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ. |
೬ |
ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ. |
೭ |
“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ. |
೮ |
ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.” |
೯ |
ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ? |
೧೦ |
ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು. |
೧೧ |
ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು. |
೧೨ |
“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ? |
೧೩ |
ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ? |
೧೪ |
ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ. |
೧೫ |
ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ! |
೧೬ |
ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.” |
೧೭ |
ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ! |
೧೮ |
ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು. |
೧೯ |
ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ? |
೨೦ |
ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು. |
೨೧ |
ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು. |
೨೨ |
ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು: ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು. |
೨೩ |
ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಶಾಯನ ೫೧:1 |
ಯೆಶಾಯನ ೫೧:2 |
ಯೆಶಾಯನ ೫೧:3 |
ಯೆಶಾಯನ ೫೧:4 |
ಯೆಶಾಯನ ೫೧:5 |
ಯೆಶಾಯನ ೫೧:6 |
ಯೆಶಾಯನ ೫೧:7 |
ಯೆಶಾಯನ ೫೧:8 |
ಯೆಶಾಯನ ೫೧:9 |
ಯೆಶಾಯನ ೫೧:10 |
ಯೆಶಾಯನ ೫೧:11 |
ಯೆಶಾಯನ ೫೧:12 |
ಯೆಶಾಯನ ೫೧:13 |
ಯೆಶಾಯನ ೫೧:14 |
ಯೆಶಾಯನ ೫೧:15 |
ಯೆಶಾಯನ ೫೧:16 |
ಯೆಶಾಯನ ೫೧:17 |
ಯೆಶಾಯನ ೫೧:18 |
ಯೆಶಾಯನ ೫೧:19 |
ಯೆಶಾಯನ ೫೧:20 |
ಯೆಶಾಯನ ೫೧:21 |
ಯೆಶಾಯನ ೫೧:22 |
ಯೆಶಾಯನ ೫೧:23 |
|
|
|
|
|
|
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |