೧ |
ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. |
೨ |
ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ. |
೩ |
ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ. |
೪ |
ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ? |
೫ |
ಓಕ್ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ. |
೬ |
ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ? |
೭ |
ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ. |
೮ |
ಬಾಗಿಲಿನ ಹಾಗು ಬಾಗಿಲಿನ ನಿಲುವಿನ ಹಿಂಭಾಗದಲ್ಲಿ ಅಶ್ಲೀಲ ಸ್ಮಾರಕಗಳನ್ನು ಇಟ್ಟುಕೊಂಡಿರುವೆ. ನನ್ನನ್ನು ತ್ಯಜಿಸಿಬಿಟ್ಟು, ನಿನ್ನ ಹಾಸಿಗೆಯನ್ನು ಬಿಚ್ಚಿರುವೆ. ಅನ್ಯರ ಸಂಗಮವನ್ನು ಬಯಸಿ ಅವರೊಂದಿಗೆ ಬೆಲೆಗೆ ಒಪ್ಪಂದ ಮಾಡಿಕೊಂಡಿರುವೆ; ಬಳಿಕ ಕಾಮವಿಲಾಸದಲ್ಲಿ ತೊಡಗಿರುವೆ. |
೯ |
ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ. |
೧೦ |
ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ. |
೧೧ |
ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ? |
೧೨ |
ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು. |
೧೩ |
ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು. |
೧೪ |
“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು. |
೧೫ |
“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು: ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ. |
೧೬ |
ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ? |
೧೭ |
ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ. |
೧೮ |
“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ. |
೧೯ |
ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ. |
೨೦ |
“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ. |
೨೧ |
ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು. |
Kannada Bible (KNCL) 2016 |
No Data |
ಯೆಶಾಯನ ೫೭:1 |
ಯೆಶಾಯನ ೫೭:2 |
ಯೆಶಾಯನ ೫೭:3 |
ಯೆಶಾಯನ ೫೭:4 |
ಯೆಶಾಯನ ೫೭:5 |
ಯೆಶಾಯನ ೫೭:6 |
ಯೆಶಾಯನ ೫೭:7 |
ಯೆಶಾಯನ ೫೭:8 |
ಯೆಶಾಯನ ೫೭:9 |
ಯೆಶಾಯನ ೫೭:10 |
ಯೆಶಾಯನ ೫೭:11 |
ಯೆಶಾಯನ ೫೭:12 |
ಯೆಶಾಯನ ೫೭:13 |
ಯೆಶಾಯನ ೫೭:14 |
ಯೆಶಾಯನ ೫೭:15 |
ಯೆಶಾಯನ ೫೭:16 |
ಯೆಶಾಯನ ೫೭:17 |
ಯೆಶಾಯನ ೫೭:18 |
ಯೆಶಾಯನ ೫೭:19 |
ಯೆಶಾಯನ ೫೭:20 |
ಯೆಶಾಯನ ೫೭:21 |
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |
|
|
|
|
|