A A A A A
×

ಕನ್ನಡ ಬೈಬಲ್ (KNCL) 2016

ಯೆಶಾಯನ ೬೩

“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು\.
ನಿನ್ನ ಉಡುಪೇತಕೆ ಕೆಂಪಗಿದೆ? ನಿನ್ನ ಬಟ್ಟೆಗಳೇಕೆ ದ್ರಾಕ್ಷೆಯನು ತುಳಿಯುವವನ ಬಟ್ಟೆಯ ಹಾಗಿದೆ?
“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.
ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.
ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.
ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.
ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.
“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.
ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.
೧೦
ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.
೧೧
ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು: “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?
೧೨
ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?
೧೩
ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?
೧೪
ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.
೧೫
ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?
೧೬
ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.
೧೭
ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.
೧೮
ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ!
೧೯
ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ!
ಯೆಶಾಯನ ೬೩:1
ಯೆಶಾಯನ ೬೩:2
ಯೆಶಾಯನ ೬೩:3
ಯೆಶಾಯನ ೬೩:4
ಯೆಶಾಯನ ೬೩:5
ಯೆಶಾಯನ ೬೩:6
ಯೆಶಾಯನ ೬೩:7
ಯೆಶಾಯನ ೬೩:8
ಯೆಶಾಯನ ೬೩:9
ಯೆಶಾಯನ ೬೩:10
ಯೆಶಾಯನ ೬೩:11
ಯೆಶಾಯನ ೬೩:12
ಯೆಶಾಯನ ೬೩:13
ಯೆಶಾಯನ ೬೩:14
ಯೆಶಾಯನ ೬೩:15
ಯೆಶಾಯನ ೬೩:16
ಯೆಶಾಯನ ೬೩:17
ಯೆಶಾಯನ ೬೩:18
ಯೆಶಾಯನ ೬೩:19
ಯೆಶಾಯನ 1 / ಯೆಶ 1
ಯೆಶಾಯನ 2 / ಯೆಶ 2
ಯೆಶಾಯನ 3 / ಯೆಶ 3
ಯೆಶಾಯನ 4 / ಯೆಶ 4
ಯೆಶಾಯನ 5 / ಯೆಶ 5
ಯೆಶಾಯನ 6 / ಯೆಶ 6
ಯೆಶಾಯನ 7 / ಯೆಶ 7
ಯೆಶಾಯನ 8 / ಯೆಶ 8
ಯೆಶಾಯನ 9 / ಯೆಶ 9
ಯೆಶಾಯನ 10 / ಯೆಶ 10
ಯೆಶಾಯನ 11 / ಯೆಶ 11
ಯೆಶಾಯನ 12 / ಯೆಶ 12
ಯೆಶಾಯನ 13 / ಯೆಶ 13
ಯೆಶಾಯನ 14 / ಯೆಶ 14
ಯೆಶಾಯನ 15 / ಯೆಶ 15
ಯೆಶಾಯನ 16 / ಯೆಶ 16
ಯೆಶಾಯನ 17 / ಯೆಶ 17
ಯೆಶಾಯನ 18 / ಯೆಶ 18
ಯೆಶಾಯನ 19 / ಯೆಶ 19
ಯೆಶಾಯನ 20 / ಯೆಶ 20
ಯೆಶಾಯನ 21 / ಯೆಶ 21
ಯೆಶಾಯನ 22 / ಯೆಶ 22
ಯೆಶಾಯನ 23 / ಯೆಶ 23
ಯೆಶಾಯನ 24 / ಯೆಶ 24
ಯೆಶಾಯನ 25 / ಯೆಶ 25
ಯೆಶಾಯನ 26 / ಯೆಶ 26
ಯೆಶಾಯನ 27 / ಯೆಶ 27
ಯೆಶಾಯನ 28 / ಯೆಶ 28
ಯೆಶಾಯನ 29 / ಯೆಶ 29
ಯೆಶಾಯನ 30 / ಯೆಶ 30
ಯೆಶಾಯನ 31 / ಯೆಶ 31
ಯೆಶಾಯನ 32 / ಯೆಶ 32
ಯೆಶಾಯನ 33 / ಯೆಶ 33
ಯೆಶಾಯನ 34 / ಯೆಶ 34
ಯೆಶಾಯನ 35 / ಯೆಶ 35
ಯೆಶಾಯನ 36 / ಯೆಶ 36
ಯೆಶಾಯನ 37 / ಯೆಶ 37
ಯೆಶಾಯನ 38 / ಯೆಶ 38
ಯೆಶಾಯನ 39 / ಯೆಶ 39
ಯೆಶಾಯನ 40 / ಯೆಶ 40
ಯೆಶಾಯನ 41 / ಯೆಶ 41
ಯೆಶಾಯನ 42 / ಯೆಶ 42
ಯೆಶಾಯನ 43 / ಯೆಶ 43
ಯೆಶಾಯನ 44 / ಯೆಶ 44
ಯೆಶಾಯನ 45 / ಯೆಶ 45
ಯೆಶಾಯನ 46 / ಯೆಶ 46
ಯೆಶಾಯನ 47 / ಯೆಶ 47
ಯೆಶಾಯನ 48 / ಯೆಶ 48
ಯೆಶಾಯನ 49 / ಯೆಶ 49
ಯೆಶಾಯನ 50 / ಯೆಶ 50
ಯೆಶಾಯನ 51 / ಯೆಶ 51
ಯೆಶಾಯನ 52 / ಯೆಶ 52
ಯೆಶಾಯನ 53 / ಯೆಶ 53
ಯೆಶಾಯನ 54 / ಯೆಶ 54
ಯೆಶಾಯನ 55 / ಯೆಶ 55
ಯೆಶಾಯನ 56 / ಯೆಶ 56
ಯೆಶಾಯನ 57 / ಯೆಶ 57
ಯೆಶಾಯನ 58 / ಯೆಶ 58
ಯೆಶಾಯನ 59 / ಯೆಶ 59
ಯೆಶಾಯನ 60 / ಯೆಶ 60
ಯೆಶಾಯನ 61 / ಯೆಶ 61
ಯೆಶಾಯನ 62 / ಯೆಶ 62
ಯೆಶಾಯನ 63 / ಯೆಶ 63
ಯೆಶಾಯನ 64 / ಯೆಶ 64
ಯೆಶಾಯನ 65 / ಯೆಶ 65
ಯೆಶಾಯನ 66 / ಯೆಶ 66