೧ |
ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ. |
೨ |
ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು. |
೩ |
ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು: “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು: |
೪ |
ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ. |
೫ |
ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ. |
೬ |
‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ. |
೭ |
“ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ. |
೮ |
ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು. |
೯ |
ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.” |
೧೦ |
ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ: |
೧೧ |
“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು. |
೧೨ |
ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು. |
೧೩ |
ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? |
೧೪ |
ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು. |
೧೫ |
ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು. |
೧೬ |
ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು. |
೧೭ |
ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ. |
೧೮ |
ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು. |
೧೯ |
ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು. |
೨೦ |
ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು. |
೨೧ |
ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು. |
೨೨ |
ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು. |
೨೩ |
ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು. |
೨೪ |
ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು. |
೨೫ |
ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.” |
Kannada Bible (KNCL) 2016 |
No Data |
ಯೆಶಾಯನ ೭:1 |
ಯೆಶಾಯನ ೭:2 |
ಯೆಶಾಯನ ೭:3 |
ಯೆಶಾಯನ ೭:4 |
ಯೆಶಾಯನ ೭:5 |
ಯೆಶಾಯನ ೭:6 |
ಯೆಶಾಯನ ೭:7 |
ಯೆಶಾಯನ ೭:8 |
ಯೆಶಾಯನ ೭:9 |
ಯೆಶಾಯನ ೭:10 |
ಯೆಶಾಯನ ೭:11 |
ಯೆಶಾಯನ ೭:12 |
ಯೆಶಾಯನ ೭:13 |
ಯೆಶಾಯನ ೭:14 |
ಯೆಶಾಯನ ೭:15 |
ಯೆಶಾಯನ ೭:16 |
ಯೆಶಾಯನ ೭:17 |
ಯೆಶಾಯನ ೭:18 |
ಯೆಶಾಯನ ೭:19 |
ಯೆಶಾಯನ ೭:20 |
ಯೆಶಾಯನ ೭:21 |
ಯೆಶಾಯನ ೭:22 |
ಯೆಶಾಯನ ೭:23 |
ಯೆಶಾಯನ ೭:24 |
ಯೆಶಾಯನ ೭:25 |
ಯೆಶಾಯನ 1 / ಯೆಶ 1 |
ಯೆಶಾಯನ 2 / ಯೆಶ 2 |
ಯೆಶಾಯನ 3 / ಯೆಶ 3 |
ಯೆಶಾಯನ 4 / ಯೆಶ 4 |
ಯೆಶಾಯನ 5 / ಯೆಶ 5 |
ಯೆಶಾಯನ 6 / ಯೆಶ 6 |
ಯೆಶಾಯನ 7 / ಯೆಶ 7 |
ಯೆಶಾಯನ 8 / ಯೆಶ 8 |
ಯೆಶಾಯನ 9 / ಯೆಶ 9 |
ಯೆಶಾಯನ 10 / ಯೆಶ 10 |
ಯೆಶಾಯನ 11 / ಯೆಶ 11 |
ಯೆಶಾಯನ 12 / ಯೆಶ 12 |
ಯೆಶಾಯನ 13 / ಯೆಶ 13 |
ಯೆಶಾಯನ 14 / ಯೆಶ 14 |
ಯೆಶಾಯನ 15 / ಯೆಶ 15 |
ಯೆಶಾಯನ 16 / ಯೆಶ 16 |
ಯೆಶಾಯನ 17 / ಯೆಶ 17 |
ಯೆಶಾಯನ 18 / ಯೆಶ 18 |
ಯೆಶಾಯನ 19 / ಯೆಶ 19 |
ಯೆಶಾಯನ 20 / ಯೆಶ 20 |
ಯೆಶಾಯನ 21 / ಯೆಶ 21 |
ಯೆಶಾಯನ 22 / ಯೆಶ 22 |
ಯೆಶಾಯನ 23 / ಯೆಶ 23 |
ಯೆಶಾಯನ 24 / ಯೆಶ 24 |
ಯೆಶಾಯನ 25 / ಯೆಶ 25 |
ಯೆಶಾಯನ 26 / ಯೆಶ 26 |
ಯೆಶಾಯನ 27 / ಯೆಶ 27 |
ಯೆಶಾಯನ 28 / ಯೆಶ 28 |
ಯೆಶಾಯನ 29 / ಯೆಶ 29 |
ಯೆಶಾಯನ 30 / ಯೆಶ 30 |
ಯೆಶಾಯನ 31 / ಯೆಶ 31 |
ಯೆಶಾಯನ 32 / ಯೆಶ 32 |
ಯೆಶಾಯನ 33 / ಯೆಶ 33 |
ಯೆಶಾಯನ 34 / ಯೆಶ 34 |
ಯೆಶಾಯನ 35 / ಯೆಶ 35 |
ಯೆಶಾಯನ 36 / ಯೆಶ 36 |
ಯೆಶಾಯನ 37 / ಯೆಶ 37 |
ಯೆಶಾಯನ 38 / ಯೆಶ 38 |
ಯೆಶಾಯನ 39 / ಯೆಶ 39 |
ಯೆಶಾಯನ 40 / ಯೆಶ 40 |
ಯೆಶಾಯನ 41 / ಯೆಶ 41 |
ಯೆಶಾಯನ 42 / ಯೆಶ 42 |
ಯೆಶಾಯನ 43 / ಯೆಶ 43 |
ಯೆಶಾಯನ 44 / ಯೆಶ 44 |
ಯೆಶಾಯನ 45 / ಯೆಶ 45 |
ಯೆಶಾಯನ 46 / ಯೆಶ 46 |
ಯೆಶಾಯನ 47 / ಯೆಶ 47 |
ಯೆಶಾಯನ 48 / ಯೆಶ 48 |
ಯೆಶಾಯನ 49 / ಯೆಶ 49 |
ಯೆಶಾಯನ 50 / ಯೆಶ 50 |
ಯೆಶಾಯನ 51 / ಯೆಶ 51 |
ಯೆಶಾಯನ 52 / ಯೆಶ 52 |
ಯೆಶಾಯನ 53 / ಯೆಶ 53 |
ಯೆಶಾಯನ 54 / ಯೆಶ 54 |
ಯೆಶಾಯನ 55 / ಯೆಶ 55 |
ಯೆಶಾಯನ 56 / ಯೆಶ 56 |
ಯೆಶಾಯನ 57 / ಯೆಶ 57 |
ಯೆಶಾಯನ 58 / ಯೆಶ 58 |
ಯೆಶಾಯನ 59 / ಯೆಶ 59 |
ಯೆಶಾಯನ 60 / ಯೆಶ 60 |
ಯೆಶಾಯನ 61 / ಯೆಶ 61 |
ಯೆಶಾಯನ 62 / ಯೆಶ 62 |
ಯೆಶಾಯನ 63 / ಯೆಶ 63 |
ಯೆಶಾಯನ 64 / ಯೆಶ 64 |
ಯೆಶಾಯನ 65 / ಯೆಶ 65 |
ಯೆಶಾಯನ 66 / ಯೆಶ 66 |
|
|
|
|
|