೧ |
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; |
೨ |
“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ. |
೩ |
ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. |
೪ |
“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ, |
೫ |
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ, |
೬ |
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.” |
೭ |
ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು. |
೮ |
ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು. |
೯ |
“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು. |
೧೦ |
ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು. |
೧೧ |
ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು. |
೧೨ |
ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ. |
೧೩ |
ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು. |
೧೪ |
ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ. |
೧೫ |
ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು. |
೧೬ |
ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು. |
೧೭ |
ತರುವಾಯ ನಾಡಿನ ಹಿರಿಯರಲ್ಲಿ ಕೆಲವರು ಎದ್ದು ನಿಂತು ನೆರೆದಿದ್ದ ಜನರನ್ನು ಉದ್ದೇಶಿಸಿ ಹೀಗೆಂದರು: |
೧೮ |
“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ. |
೧೯ |
ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು. |
೨೦ |
ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ. |
೨೧ |
ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ. |
೨೨ |
ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ. |
೨೩ |
ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ. |
೨೪ |
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು. |
Kannada Bible (KNCL) 2016 |
No Data |
ಯೆರೆಮೀಯನ ಗ್ರಂಥ ೨೬:1 |
ಯೆರೆಮೀಯನ ಗ್ರಂಥ ೨೬:2 |
ಯೆರೆಮೀಯನ ಗ್ರಂಥ ೨೬:3 |
ಯೆರೆಮೀಯನ ಗ್ರಂಥ ೨೬:4 |
ಯೆರೆಮೀಯನ ಗ್ರಂಥ ೨೬:5 |
ಯೆರೆಮೀಯನ ಗ್ರಂಥ ೨೬:6 |
ಯೆರೆಮೀಯನ ಗ್ರಂಥ ೨೬:7 |
ಯೆರೆಮೀಯನ ಗ್ರಂಥ ೨೬:8 |
ಯೆರೆಮೀಯನ ಗ್ರಂಥ ೨೬:9 |
ಯೆರೆಮೀಯನ ಗ್ರಂಥ ೨೬:10 |
ಯೆರೆಮೀಯನ ಗ್ರಂಥ ೨೬:11 |
ಯೆರೆಮೀಯನ ಗ್ರಂಥ ೨೬:12 |
ಯೆರೆಮೀಯನ ಗ್ರಂಥ ೨೬:13 |
ಯೆರೆಮೀಯನ ಗ್ರಂಥ ೨೬:14 |
ಯೆರೆಮೀಯನ ಗ್ರಂಥ ೨೬:15 |
ಯೆರೆಮೀಯನ ಗ್ರಂಥ ೨೬:16 |
ಯೆರೆಮೀಯನ ಗ್ರಂಥ ೨೬:17 |
ಯೆರೆಮೀಯನ ಗ್ರಂಥ ೨೬:18 |
ಯೆರೆಮೀಯನ ಗ್ರಂಥ ೨೬:19 |
ಯೆರೆಮೀಯನ ಗ್ರಂಥ ೨೬:20 |
ಯೆರೆಮೀಯನ ಗ್ರಂಥ ೨೬:21 |
ಯೆರೆಮೀಯನ ಗ್ರಂಥ ೨೬:22 |
ಯೆರೆಮೀಯನ ಗ್ರಂಥ ೨೬:23 |
ಯೆರೆಮೀಯನ ಗ್ರಂಥ ೨೬:24 |
ಯೆರೆಮೀಯನ ಗ್ರಂಥ 1 / ಯೆಗ್ರ 1 |
ಯೆರೆಮೀಯನ ಗ್ರಂಥ 2 / ಯೆಗ್ರ 2 |
ಯೆರೆಮೀಯನ ಗ್ರಂಥ 3 / ಯೆಗ್ರ 3 |
ಯೆರೆಮೀಯನ ಗ್ರಂಥ 4 / ಯೆಗ್ರ 4 |
ಯೆರೆಮೀಯನ ಗ್ರಂಥ 5 / ಯೆಗ್ರ 5 |
ಯೆರೆಮೀಯನ ಗ್ರಂಥ 6 / ಯೆಗ್ರ 6 |
ಯೆರೆಮೀಯನ ಗ್ರಂಥ 7 / ಯೆಗ್ರ 7 |
ಯೆರೆಮೀಯನ ಗ್ರಂಥ 8 / ಯೆಗ್ರ 8 |
ಯೆರೆಮೀಯನ ಗ್ರಂಥ 9 / ಯೆಗ್ರ 9 |
ಯೆರೆಮೀಯನ ಗ್ರಂಥ 10 / ಯೆಗ್ರ 10 |
ಯೆರೆಮೀಯನ ಗ್ರಂಥ 11 / ಯೆಗ್ರ 11 |
ಯೆರೆಮೀಯನ ಗ್ರಂಥ 12 / ಯೆಗ್ರ 12 |
ಯೆರೆಮೀಯನ ಗ್ರಂಥ 13 / ಯೆಗ್ರ 13 |
ಯೆರೆಮೀಯನ ಗ್ರಂಥ 14 / ಯೆಗ್ರ 14 |
ಯೆರೆಮೀಯನ ಗ್ರಂಥ 15 / ಯೆಗ್ರ 15 |
ಯೆರೆಮೀಯನ ಗ್ರಂಥ 16 / ಯೆಗ್ರ 16 |
ಯೆರೆಮೀಯನ ಗ್ರಂಥ 17 / ಯೆಗ್ರ 17 |
ಯೆರೆಮೀಯನ ಗ್ರಂಥ 18 / ಯೆಗ್ರ 18 |
ಯೆರೆಮೀಯನ ಗ್ರಂಥ 19 / ಯೆಗ್ರ 19 |
ಯೆರೆಮೀಯನ ಗ್ರಂಥ 20 / ಯೆಗ್ರ 20 |
ಯೆರೆಮೀಯನ ಗ್ರಂಥ 21 / ಯೆಗ್ರ 21 |
ಯೆರೆಮೀಯನ ಗ್ರಂಥ 22 / ಯೆಗ್ರ 22 |
ಯೆರೆಮೀಯನ ಗ್ರಂಥ 23 / ಯೆಗ್ರ 23 |
ಯೆರೆಮೀಯನ ಗ್ರಂಥ 24 / ಯೆಗ್ರ 24 |
ಯೆರೆಮೀಯನ ಗ್ರಂಥ 25 / ಯೆಗ್ರ 25 |
ಯೆರೆಮೀಯನ ಗ್ರಂಥ 26 / ಯೆಗ್ರ 26 |
ಯೆರೆಮೀಯನ ಗ್ರಂಥ 27 / ಯೆಗ್ರ 27 |
ಯೆರೆಮೀಯನ ಗ್ರಂಥ 28 / ಯೆಗ್ರ 28 |
ಯೆರೆಮೀಯನ ಗ್ರಂಥ 29 / ಯೆಗ್ರ 29 |
ಯೆರೆಮೀಯನ ಗ್ರಂಥ 30 / ಯೆಗ್ರ 30 |
ಯೆರೆಮೀಯನ ಗ್ರಂಥ 31 / ಯೆಗ್ರ 31 |
ಯೆರೆಮೀಯನ ಗ್ರಂಥ 32 / ಯೆಗ್ರ 32 |
ಯೆರೆಮೀಯನ ಗ್ರಂಥ 33 / ಯೆಗ್ರ 33 |
ಯೆರೆಮೀಯನ ಗ್ರಂಥ 34 / ಯೆಗ್ರ 34 |
ಯೆರೆಮೀಯನ ಗ್ರಂಥ 35 / ಯೆಗ್ರ 35 |
ಯೆರೆಮೀಯನ ಗ್ರಂಥ 36 / ಯೆಗ್ರ 36 |
ಯೆರೆಮೀಯನ ಗ್ರಂಥ 37 / ಯೆಗ್ರ 37 |
ಯೆರೆಮೀಯನ ಗ್ರಂಥ 38 / ಯೆಗ್ರ 38 |
ಯೆರೆಮೀಯನ ಗ್ರಂಥ 39 / ಯೆಗ್ರ 39 |
ಯೆರೆಮೀಯನ ಗ್ರಂಥ 40 / ಯೆಗ್ರ 40 |
ಯೆರೆಮೀಯನ ಗ್ರಂಥ 41 / ಯೆಗ್ರ 41 |
ಯೆರೆಮೀಯನ ಗ್ರಂಥ 42 / ಯೆಗ್ರ 42 |
ಯೆರೆಮೀಯನ ಗ್ರಂಥ 43 / ಯೆಗ್ರ 43 |
ಯೆರೆಮೀಯನ ಗ್ರಂಥ 44 / ಯೆಗ್ರ 44 |
ಯೆರೆಮೀಯನ ಗ್ರಂಥ 45 / ಯೆಗ್ರ 45 |
ಯೆರೆಮೀಯನ ಗ್ರಂಥ 46 / ಯೆಗ್ರ 46 |
ಯೆರೆಮೀಯನ ಗ್ರಂಥ 47 / ಯೆಗ್ರ 47 |
ಯೆರೆಮೀಯನ ಗ್ರಂಥ 48 / ಯೆಗ್ರ 48 |
ಯೆರೆಮೀಯನ ಗ್ರಂಥ 49 / ಯೆಗ್ರ 49 |
ಯೆರೆಮೀಯನ ಗ್ರಂಥ 50 / ಯೆಗ್ರ 50 |
ಯೆರೆಮೀಯನ ಗ್ರಂಥ 51 / ಯೆಗ್ರ 51 |
ಯೆರೆಮೀಯನ ಗ್ರಂಥ 52 / ಯೆಗ್ರ 52 |
|
|
|
|
|