೧ |
ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - |
೨ |
“ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - |
೩ |
ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ. |
೪ |
ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ. |
೫ |
“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ. |
೬ |
ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ. |
೭ |
ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು, |
೮ |
ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು. |
೯ |
ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು. |
೧೦ |
“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ. |
೧೧ |
ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ. |
೧೨ |
ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು. |
೧೩ |
ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.” |
೧೪ |
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು. |
೧೫ |
ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಜೆಕಿಯೇಲನ ೩೫:1 |
ಯೆಜೆಕಿಯೇಲನ ೩೫:2 |
ಯೆಜೆಕಿಯೇಲನ ೩೫:3 |
ಯೆಜೆಕಿಯೇಲನ ೩೫:4 |
ಯೆಜೆಕಿಯೇಲನ ೩೫:5 |
ಯೆಜೆಕಿಯೇಲನ ೩೫:6 |
ಯೆಜೆಕಿಯೇಲನ ೩೫:7 |
ಯೆಜೆಕಿಯೇಲನ ೩೫:8 |
ಯೆಜೆಕಿಯೇಲನ ೩೫:9 |
ಯೆಜೆಕಿಯೇಲನ ೩೫:10 |
ಯೆಜೆಕಿಯೇಲನ ೩೫:11 |
ಯೆಜೆಕಿಯೇಲನ ೩೫:12 |
ಯೆಜೆಕಿಯೇಲನ ೩೫:13 |
ಯೆಜೆಕಿಯೇಲನ ೩೫:14 |
ಯೆಜೆಕಿಯೇಲನ ೩೫:15 |
|
|
|
|
|
|
ಯೆಜೆಕಿಯೇಲನ 1 / ಯೆಜೆಕಿ 1 |
ಯೆಜೆಕಿಯೇಲನ 2 / ಯೆಜೆಕಿ 2 |
ಯೆಜೆಕಿಯೇಲನ 3 / ಯೆಜೆಕಿ 3 |
ಯೆಜೆಕಿಯೇಲನ 4 / ಯೆಜೆಕಿ 4 |
ಯೆಜೆಕಿಯೇಲನ 5 / ಯೆಜೆಕಿ 5 |
ಯೆಜೆಕಿಯೇಲನ 6 / ಯೆಜೆಕಿ 6 |
ಯೆಜೆಕಿಯೇಲನ 7 / ಯೆಜೆಕಿ 7 |
ಯೆಜೆಕಿಯೇಲನ 8 / ಯೆಜೆಕಿ 8 |
ಯೆಜೆಕಿಯೇಲನ 9 / ಯೆಜೆಕಿ 9 |
ಯೆಜೆಕಿಯೇಲನ 10 / ಯೆಜೆಕಿ 10 |
ಯೆಜೆಕಿಯೇಲನ 11 / ಯೆಜೆಕಿ 11 |
ಯೆಜೆಕಿಯೇಲನ 12 / ಯೆಜೆಕಿ 12 |
ಯೆಜೆಕಿಯೇಲನ 13 / ಯೆಜೆಕಿ 13 |
ಯೆಜೆಕಿಯೇಲನ 14 / ಯೆಜೆಕಿ 14 |
ಯೆಜೆಕಿಯೇಲನ 15 / ಯೆಜೆಕಿ 15 |
ಯೆಜೆಕಿಯೇಲನ 16 / ಯೆಜೆಕಿ 16 |
ಯೆಜೆಕಿಯೇಲನ 17 / ಯೆಜೆಕಿ 17 |
ಯೆಜೆಕಿಯೇಲನ 18 / ಯೆಜೆಕಿ 18 |
ಯೆಜೆಕಿಯೇಲನ 19 / ಯೆಜೆಕಿ 19 |
ಯೆಜೆಕಿಯೇಲನ 20 / ಯೆಜೆಕಿ 20 |
ಯೆಜೆಕಿಯೇಲನ 21 / ಯೆಜೆಕಿ 21 |
ಯೆಜೆಕಿಯೇಲನ 22 / ಯೆಜೆಕಿ 22 |
ಯೆಜೆಕಿಯೇಲನ 23 / ಯೆಜೆಕಿ 23 |
ಯೆಜೆಕಿಯೇಲನ 24 / ಯೆಜೆಕಿ 24 |
ಯೆಜೆಕಿಯೇಲನ 25 / ಯೆಜೆಕಿ 25 |
ಯೆಜೆಕಿಯೇಲನ 26 / ಯೆಜೆಕಿ 26 |
ಯೆಜೆಕಿಯೇಲನ 27 / ಯೆಜೆಕಿ 27 |
ಯೆಜೆಕಿಯೇಲನ 28 / ಯೆಜೆಕಿ 28 |
ಯೆಜೆಕಿಯೇಲನ 29 / ಯೆಜೆಕಿ 29 |
ಯೆಜೆಕಿಯೇಲನ 30 / ಯೆಜೆಕಿ 30 |
ಯೆಜೆಕಿಯೇಲನ 31 / ಯೆಜೆಕಿ 31 |
ಯೆಜೆಕಿಯೇಲನ 32 / ಯೆಜೆಕಿ 32 |
ಯೆಜೆಕಿಯೇಲನ 33 / ಯೆಜೆಕಿ 33 |
ಯೆಜೆಕಿಯೇಲನ 34 / ಯೆಜೆಕಿ 34 |
ಯೆಜೆಕಿಯೇಲನ 35 / ಯೆಜೆಕಿ 35 |
ಯೆಜೆಕಿಯೇಲನ 36 / ಯೆಜೆಕಿ 36 |
ಯೆಜೆಕಿಯೇಲನ 37 / ಯೆಜೆಕಿ 37 |
ಯೆಜೆಕಿಯೇಲನ 38 / ಯೆಜೆಕಿ 38 |
ಯೆಜೆಕಿಯೇಲನ 39 / ಯೆಜೆಕಿ 39 |
ಯೆಜೆಕಿಯೇಲನ 40 / ಯೆಜೆಕಿ 40 |
ಯೆಜೆಕಿಯೇಲನ 41 / ಯೆಜೆಕಿ 41 |
ಯೆಜೆಕಿಯೇಲನ 42 / ಯೆಜೆಕಿ 42 |
ಯೆಜೆಕಿಯೇಲನ 43 / ಯೆಜೆಕಿ 43 |
ಯೆಜೆಕಿಯೇಲನ 44 / ಯೆಜೆಕಿ 44 |
ಯೆಜೆಕಿಯೇಲನ 45 / ಯೆಜೆಕಿ 45 |
ಯೆಜೆಕಿಯೇಲನ 46 / ಯೆಜೆಕಿ 46 |
ಯೆಜೆಕಿಯೇಲನ 47 / ಯೆಜೆಕಿ 47 |
ಯೆಜೆಕಿಯೇಲನ 48 / ಯೆಜೆಕಿ 48 |