೧ |
ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು: |
೨ |
“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’ |
೩ |
“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು. |
೪ |
ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.” |
೫ |
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು; |
೬ |
ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು; |
೭ |
ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ, ಅದು ಬರೀ ಗೋಳೇ! |
೮ |
“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. |
೯ |
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು. |
೧೦ |
“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ; |
೧೧ |
ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು. |
೧೨ |
“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. |
೧೩ |
ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು; |
೧೪ |
ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ. |
೧೫ |
“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು. |
೧೬ |
ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು. |
೧೭ |
ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು. |
೧೮ |
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು. |
೧೯ |
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು. |
೨೦ |
“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. |
೨೧ |
ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು. |
೨೨ |
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು. |
೨೩ |
“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ. |
೨೪ |
ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು; |
೨೫ |
ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು. |
೨೬ |
ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು. |
೨೭ |
ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.” |
Kannada Bible (KNCL) 2016 |
No Data |
ಯೆಜೆಕಿಯೇಲನ ೭:1 |
ಯೆಜೆಕಿಯೇಲನ ೭:2 |
ಯೆಜೆಕಿಯೇಲನ ೭:3 |
ಯೆಜೆಕಿಯೇಲನ ೭:4 |
ಯೆಜೆಕಿಯೇಲನ ೭:5 |
ಯೆಜೆಕಿಯೇಲನ ೭:6 |
ಯೆಜೆಕಿಯೇಲನ ೭:7 |
ಯೆಜೆಕಿಯೇಲನ ೭:8 |
ಯೆಜೆಕಿಯೇಲನ ೭:9 |
ಯೆಜೆಕಿಯೇಲನ ೭:10 |
ಯೆಜೆಕಿಯೇಲನ ೭:11 |
ಯೆಜೆಕಿಯೇಲನ ೭:12 |
ಯೆಜೆಕಿಯೇಲನ ೭:13 |
ಯೆಜೆಕಿಯೇಲನ ೭:14 |
ಯೆಜೆಕಿಯೇಲನ ೭:15 |
ಯೆಜೆಕಿಯೇಲನ ೭:16 |
ಯೆಜೆಕಿಯೇಲನ ೭:17 |
ಯೆಜೆಕಿಯೇಲನ ೭:18 |
ಯೆಜೆಕಿಯೇಲನ ೭:19 |
ಯೆಜೆಕಿಯೇಲನ ೭:20 |
ಯೆಜೆಕಿಯೇಲನ ೭:21 |
ಯೆಜೆಕಿಯೇಲನ ೭:22 |
ಯೆಜೆಕಿಯೇಲನ ೭:23 |
ಯೆಜೆಕಿಯೇಲನ ೭:24 |
ಯೆಜೆಕಿಯೇಲನ ೭:25 |
ಯೆಜೆಕಿಯೇಲನ ೭:26 |
ಯೆಜೆಕಿಯೇಲನ ೭:27 |
ಯೆಜೆಕಿಯೇಲನ 1 / ಯೆಜೆಕಿ 1 |
ಯೆಜೆಕಿಯೇಲನ 2 / ಯೆಜೆಕಿ 2 |
ಯೆಜೆಕಿಯೇಲನ 3 / ಯೆಜೆಕಿ 3 |
ಯೆಜೆಕಿಯೇಲನ 4 / ಯೆಜೆಕಿ 4 |
ಯೆಜೆಕಿಯೇಲನ 5 / ಯೆಜೆಕಿ 5 |
ಯೆಜೆಕಿಯೇಲನ 6 / ಯೆಜೆಕಿ 6 |
ಯೆಜೆಕಿಯೇಲನ 7 / ಯೆಜೆಕಿ 7 |
ಯೆಜೆಕಿಯೇಲನ 8 / ಯೆಜೆಕಿ 8 |
ಯೆಜೆಕಿಯೇಲನ 9 / ಯೆಜೆಕಿ 9 |
ಯೆಜೆಕಿಯೇಲನ 10 / ಯೆಜೆಕಿ 10 |
ಯೆಜೆಕಿಯೇಲನ 11 / ಯೆಜೆಕಿ 11 |
ಯೆಜೆಕಿಯೇಲನ 12 / ಯೆಜೆಕಿ 12 |
ಯೆಜೆಕಿಯೇಲನ 13 / ಯೆಜೆಕಿ 13 |
ಯೆಜೆಕಿಯೇಲನ 14 / ಯೆಜೆಕಿ 14 |
ಯೆಜೆಕಿಯೇಲನ 15 / ಯೆಜೆಕಿ 15 |
ಯೆಜೆಕಿಯೇಲನ 16 / ಯೆಜೆಕಿ 16 |
ಯೆಜೆಕಿಯೇಲನ 17 / ಯೆಜೆಕಿ 17 |
ಯೆಜೆಕಿಯೇಲನ 18 / ಯೆಜೆಕಿ 18 |
ಯೆಜೆಕಿಯೇಲನ 19 / ಯೆಜೆಕಿ 19 |
ಯೆಜೆಕಿಯೇಲನ 20 / ಯೆಜೆಕಿ 20 |
ಯೆಜೆಕಿಯೇಲನ 21 / ಯೆಜೆಕಿ 21 |
ಯೆಜೆಕಿಯೇಲನ 22 / ಯೆಜೆಕಿ 22 |
ಯೆಜೆಕಿಯೇಲನ 23 / ಯೆಜೆಕಿ 23 |
ಯೆಜೆಕಿಯೇಲನ 24 / ಯೆಜೆಕಿ 24 |
ಯೆಜೆಕಿಯೇಲನ 25 / ಯೆಜೆಕಿ 25 |
ಯೆಜೆಕಿಯೇಲನ 26 / ಯೆಜೆಕಿ 26 |
ಯೆಜೆಕಿಯೇಲನ 27 / ಯೆಜೆಕಿ 27 |
ಯೆಜೆಕಿಯೇಲನ 28 / ಯೆಜೆಕಿ 28 |
ಯೆಜೆಕಿಯೇಲನ 29 / ಯೆಜೆಕಿ 29 |
ಯೆಜೆಕಿಯೇಲನ 30 / ಯೆಜೆಕಿ 30 |
ಯೆಜೆಕಿಯೇಲನ 31 / ಯೆಜೆಕಿ 31 |
ಯೆಜೆಕಿಯೇಲನ 32 / ಯೆಜೆಕಿ 32 |
ಯೆಜೆಕಿಯೇಲನ 33 / ಯೆಜೆಕಿ 33 |
ಯೆಜೆಕಿಯೇಲನ 34 / ಯೆಜೆಕಿ 34 |
ಯೆಜೆಕಿಯೇಲನ 35 / ಯೆಜೆಕಿ 35 |
ಯೆಜೆಕಿಯೇಲನ 36 / ಯೆಜೆಕಿ 36 |
ಯೆಜೆಕಿಯೇಲನ 37 / ಯೆಜೆಕಿ 37 |
ಯೆಜೆಕಿಯೇಲನ 38 / ಯೆಜೆಕಿ 38 |
ಯೆಜೆಕಿಯೇಲನ 39 / ಯೆಜೆಕಿ 39 |
ಯೆಜೆಕಿಯೇಲನ 40 / ಯೆಜೆಕಿ 40 |
ಯೆಜೆಕಿಯೇಲನ 41 / ಯೆಜೆಕಿ 41 |
ಯೆಜೆಕಿಯೇಲನ 42 / ಯೆಜೆಕಿ 42 |
ಯೆಜೆಕಿಯೇಲನ 43 / ಯೆಜೆಕಿ 43 |
ಯೆಜೆಕಿಯೇಲನ 44 / ಯೆಜೆಕಿ 44 |
ಯೆಜೆಕಿಯೇಲನ 45 / ಯೆಜೆಕಿ 45 |
ಯೆಜೆಕಿಯೇಲನ 46 / ಯೆಜೆಕಿ 46 |
ಯೆಜೆಕಿಯೇಲನ 47 / ಯೆಜೆಕಿ 47 |
ಯೆಜೆಕಿಯೇಲನ 48 / ಯೆಜೆಕಿ 48 |
|
|
|
|
|