A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ದಾನಿಯೇಲನ ೧೦ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.
ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.
ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.
ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ.
ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.
ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.
ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.
ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.
ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.
೧೦
ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.
೧೧
ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.
೧೨
ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.
೧೩
ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.
೧೪
ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.
೧೫
ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ.
೧೬
ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.
೧೭
ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.
೧೮
ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.
೧೯
ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.
೨೦
ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.
೨೧
ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.ದಾನಿಯೇಲನ ೧೦:1
ದಾನಿಯೇಲನ ೧೦:2
ದಾನಿಯೇಲನ ೧೦:3
ದಾನಿಯೇಲನ ೧೦:4
ದಾನಿಯೇಲನ ೧೦:5
ದಾನಿಯೇಲನ ೧೦:6
ದಾನಿಯೇಲನ ೧೦:7
ದಾನಿಯೇಲನ ೧೦:8
ದಾನಿಯೇಲನ ೧೦:9
ದಾನಿಯೇಲನ ೧೦:10
ದಾನಿಯೇಲನ ೧೦:11
ದಾನಿಯೇಲನ ೧೦:12
ದಾನಿಯೇಲನ ೧೦:13
ದಾನಿಯೇಲನ ೧೦:14
ದಾನಿಯೇಲನ ೧೦:15
ದಾನಿಯೇಲನ ೧೦:16
ದಾನಿಯೇಲನ ೧೦:17
ದಾನಿಯೇಲನ ೧೦:18
ದಾನಿಯೇಲನ ೧೦:19
ದಾನಿಯೇಲನ ೧೦:20
ದಾನಿಯೇಲನ ೧೦:21


ದಾನಿಯೇಲನ 1 / ದಾನಿ 1
ದಾನಿಯೇಲನ 2 / ದಾನಿ 2
ದಾನಿಯೇಲನ 3 / ದಾನಿ 3
ದಾನಿಯೇಲನ 4 / ದಾನಿ 4
ದಾನಿಯೇಲನ 5 / ದಾನಿ 5
ದಾನಿಯೇಲನ 6 / ದಾನಿ 6
ದಾನಿಯೇಲನ 7 / ದಾನಿ 7
ದಾನಿಯೇಲನ 8 / ದಾನಿ 8
ದಾನಿಯೇಲನ 9 / ದಾನಿ 9
ದಾನಿಯೇಲನ 10 / ದಾನಿ 10
ದಾನಿಯೇಲನ 11 / ದಾನಿ 11
ದಾನಿಯೇಲನ 12 / ದಾನಿ 12