೧ |
“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು. |
೨ |
ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. |
೩ |
ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು. |
೪ |
“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.” |
೫ |
ಕೂಡಲೆ ದಾನಿಯೇಲನಾದ ನಾನು ಮತ್ತೆ ಇಬ್ಬರು ವ್ಯಕ್ತಿಗಳನ್ನು ಕಂಡೆ. ಅವರಲ್ಲಿ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. |
೬ |
ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು. |
೭ |
ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. |
೮ |
ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ. |
೯ |
ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ. |
೧೦ |
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು. |
೧೧ |
ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು. |
೧೨ |
1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು! |
೧೩ |
ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.
|
Kannada Bible (KNCL) 2016 |
No Data |
|
|
|
|
|
|
|
|
|
|
ದಾನಿಯೇಲನ ೧೨:1 |
ದಾನಿಯೇಲನ ೧೨:2 |
ದಾನಿಯೇಲನ ೧೨:3 |
ದಾನಿಯೇಲನ ೧೨:4 |
ದಾನಿಯೇಲನ ೧೨:5 |
ದಾನಿಯೇಲನ ೧೨:6 |
ದಾನಿಯೇಲನ ೧೨:7 |
ದಾನಿಯೇಲನ ೧೨:8 |
ದಾನಿಯೇಲನ ೧೨:9 |
ದಾನಿಯೇಲನ ೧೨:10 |
ದಾನಿಯೇಲನ ೧೨:11 |
ದಾನಿಯೇಲನ ೧೨:12 |
ದಾನಿಯೇಲನ ೧೨:13 |
|
|
|
|
|
|
ದಾನಿಯೇಲನ 1 / ದಾನಿ 1 |
ದಾನಿಯೇಲನ 2 / ದಾನಿ 2 |
ದಾನಿಯೇಲನ 3 / ದಾನಿ 3 |
ದಾನಿಯೇಲನ 4 / ದಾನಿ 4 |
ದಾನಿಯೇಲನ 5 / ದಾನಿ 5 |
ದಾನಿಯೇಲನ 6 / ದಾನಿ 6 |
ದಾನಿಯೇಲನ 7 / ದಾನಿ 7 |
ದಾನಿಯೇಲನ 8 / ದಾನಿ 8 |
ದಾನಿಯೇಲನ 9 / ದಾನಿ 9 |
ದಾನಿಯೇಲನ 10 / ದಾನಿ 10 |
ದಾನಿಯೇಲನ 11 / ದಾನಿ 11 |
ದಾನಿಯೇಲನ 12 / ದಾನಿ 12 |