೧ |
ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. |
೨ |
ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. |
೩ |
ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು. |
೪ |
ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು. |
೫ |
ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. |
೬ |
ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ. |
೭ |
ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. |
೮ |
ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ\. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” |
೯ |
ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಹೊಶೇಯನ ೧೪:1 |
ಹೊಶೇಯನ ೧೪:2 |
ಹೊಶೇಯನ ೧೪:3 |
ಹೊಶೇಯನ ೧೪:4 |
ಹೊಶೇಯನ ೧೪:5 |
ಹೊಶೇಯನ ೧೪:6 |
ಹೊಶೇಯನ ೧೪:7 |
ಹೊಶೇಯನ ೧೪:8 |
ಹೊಶೇಯನ ೧೪:9 |
|
|
|
|
|
|
ಹೊಶೇಯನ 1 / ಹೊಶ 1 |
ಹೊಶೇಯನ 2 / ಹೊಶ 2 |
ಹೊಶೇಯನ 3 / ಹೊಶ 3 |
ಹೊಶೇಯನ 4 / ಹೊಶ 4 |
ಹೊಶೇಯನ 5 / ಹೊಶ 5 |
ಹೊಶೇಯನ 6 / ಹೊಶ 6 |
ಹೊಶೇಯನ 7 / ಹೊಶ 7 |
ಹೊಶೇಯನ 8 / ಹೊಶ 8 |
ಹೊಶೇಯನ 9 / ಹೊಶ 9 |
ಹೊಶೇಯನ 10 / ಹೊಶ 10 |
ಹೊಶೇಯನ 11 / ಹೊಶ 11 |
ಹೊಶೇಯನ 12 / ಹೊಶ 12 |
ಹೊಶೇಯನ 13 / ಹೊಶ 13 |
ಹೊಶೇಯನ 14 / ಹೊಶ 14 |