೧ |
ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: |
೨ |
“ನೀನು ಆರೋನನಿಗೂ ಅವನ ಮಕ್ಕಳಿಗೂ ಹಾಗು ಇಸ್ರಯೇಲರಿಗೂ ಹೇಳಬೇಕಾದುದು ಇದು: |
೩ |
ಇಸ್ರಯೇಲರಲ್ಲಿ ಯಾರಾದರು ಹೋರಿಯನ್ನಾಗಲಿ, ಕುರಿಯನ್ನಾಗಲಿ, ಆಡನ್ನಾಗಲಿ ಬಲಿಕೊಡುವಾಗ ಅದನ್ನು ಸರ್ವೇಶ್ವರನಿಗೆ ಸಮರ್ಪಿಸಲು ದೇವಗುಡಾರದ ಬಾಗಿಲಿಗೆ ತರದೆ |
೪ |
ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು |
೫ |
ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು. |
೬ |
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು. |
೭ |
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ. |
೮ |
“ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ |
೯ |
ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು. |
೧೦ |
“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು. |
೧೧ |
ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ. |
೧೨ |
ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ. |
೧೩ |
“ಇಸ್ರಯೇಲರಲ್ಲಾಗಲಿ ಅವರ ನಡುವೆ ವಾಸಮಾಡುವ ಅನ್ಯದೇಶೀಯರಲ್ಲಾಗಲಿ ಯಾರಾದರು ಬೇಟೆಮಾಡಿ ತಿನ್ನಬಹುದಾದ ಪ್ರಾಣಿಯನ್ನು ಅಥವಾ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿದು ಮಣ್ಣಿನಿಂದ ಮುಚ್ಚಿಡಬೇಕು. |
೧೪ |
ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ. |
೧೫ |
“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು. |
೧೬ |
ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಹಾಗು ಸ್ನಾನಮಾಡಿಕೊಳ್ಳದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.
|
Kannada Bible (KNCL) 2016 |
No Data |