A A A A A
×

ಕನ್ನಡ ಬೈಬಲ್ (KNCL) 2016

ಯಾಜಕಕಾಂಡ ೧೯

ಇಸ್ರಯೇಲ್ ಸಮಾಜದವರಿಗೆ ಹೀಗೆ ಆಜ್ಞಾಪಿಸುವಂತೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು:
“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು.
ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.
“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.
“ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.
ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.
ಮೂರನೆಯ ದಿನದ ತನಕ ಉಳಿದದ್ದು ಅಳಿಸಿಹೋದದ್ದು. ಆದುದರಿಂದ ಅದರಲ್ಲಿ ಏನನ್ನಾದರೂ ತಿಂದರೆ ಆ ಬಲಿದಾನ ಸರ್ವೇಶ್ವರನಿಗೆ ಸ್ವೀಕೃತವಾಗುವುದಿಲ್ಲ.
ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.
“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.
೧೦
ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.
೧೧
“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.
೧೨
ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.
೧೩
ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.
೧೪
ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.
೧೫
“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.
೧೬
“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.
೧೭
“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.
೧೮
ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.
೧೯
“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.
೨೦
“ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ.
೨೧
ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
೨೨
ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.
೨೩
“ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.
೨೪
ನಾಲ್ಕನೆಯ ವರ್ಷ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಸರ್ವೇಶ್ವರನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
೨೫
ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.
೨೬
“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.
೨೭
ಚಂಡಿಕೆ ಬಿಡಬೇಡ, ಗಡ್ಡವನ್ನು ವಿಕಾರಗೊಳಿಸಬೇಡ.
೨೮
ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.
೨೯
“ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.
೩೦
ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.
೩೧
“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.
೩೨
“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.
೩೩
“ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.
೩೪
ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.
೩೫
“ನ್ಯಾಯ ವಿಚಾರಣೆ, ತೂಕ ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
೩೬
ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.
೩೭
ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.
ಯಾಜಕಕಾಂಡ ೧೯:1
ಯಾಜಕಕಾಂಡ ೧೯:2
ಯಾಜಕಕಾಂಡ ೧೯:3
ಯಾಜಕಕಾಂಡ ೧೯:4
ಯಾಜಕಕಾಂಡ ೧೯:5
ಯಾಜಕಕಾಂಡ ೧೯:6
ಯಾಜಕಕಾಂಡ ೧೯:7
ಯಾಜಕಕಾಂಡ ೧೯:8
ಯಾಜಕಕಾಂಡ ೧೯:9
ಯಾಜಕಕಾಂಡ ೧೯:10
ಯಾಜಕಕಾಂಡ ೧೯:11
ಯಾಜಕಕಾಂಡ ೧೯:12
ಯಾಜಕಕಾಂಡ ೧೯:13
ಯಾಜಕಕಾಂಡ ೧೯:14
ಯಾಜಕಕಾಂಡ ೧೯:15
ಯಾಜಕಕಾಂಡ ೧೯:16
ಯಾಜಕಕಾಂಡ ೧೯:17
ಯಾಜಕಕಾಂಡ ೧೯:18
ಯಾಜಕಕಾಂಡ ೧೯:19
ಯಾಜಕಕಾಂಡ ೧೯:20
ಯಾಜಕಕಾಂಡ ೧೯:21
ಯಾಜಕಕಾಂಡ ೧೯:22
ಯಾಜಕಕಾಂಡ ೧೯:23
ಯಾಜಕಕಾಂಡ ೧೯:24
ಯಾಜಕಕಾಂಡ ೧೯:25
ಯಾಜಕಕಾಂಡ ೧೯:26
ಯಾಜಕಕಾಂಡ ೧೯:27
ಯಾಜಕಕಾಂಡ ೧೯:28
ಯಾಜಕಕಾಂಡ ೧೯:29
ಯಾಜಕಕಾಂಡ ೧೯:30
ಯಾಜಕಕಾಂಡ ೧೯:31
ಯಾಜಕಕಾಂಡ ೧೯:32
ಯಾಜಕಕಾಂಡ ೧೯:33
ಯಾಜಕಕಾಂಡ ೧೯:34
ಯಾಜಕಕಾಂಡ ೧೯:35
ಯಾಜಕಕಾಂಡ ೧೯:36
ಯಾಜಕಕಾಂಡ ೧೯:37
ಯಾಜಕಕಾಂಡ 1 / ಯಾಜಕ 1
ಯಾಜಕಕಾಂಡ 2 / ಯಾಜಕ 2
ಯಾಜಕಕಾಂಡ 3 / ಯಾಜಕ 3
ಯಾಜಕಕಾಂಡ 4 / ಯಾಜಕ 4
ಯಾಜಕಕಾಂಡ 5 / ಯಾಜಕ 5
ಯಾಜಕಕಾಂಡ 6 / ಯಾಜಕ 6
ಯಾಜಕಕಾಂಡ 7 / ಯಾಜಕ 7
ಯಾಜಕಕಾಂಡ 8 / ಯಾಜಕ 8
ಯಾಜಕಕಾಂಡ 9 / ಯಾಜಕ 9
ಯಾಜಕಕಾಂಡ 10 / ಯಾಜಕ 10
ಯಾಜಕಕಾಂಡ 11 / ಯಾಜಕ 11
ಯಾಜಕಕಾಂಡ 12 / ಯಾಜಕ 12
ಯಾಜಕಕಾಂಡ 13 / ಯಾಜಕ 13
ಯಾಜಕಕಾಂಡ 14 / ಯಾಜಕ 14
ಯಾಜಕಕಾಂಡ 15 / ಯಾಜಕ 15
ಯಾಜಕಕಾಂಡ 16 / ಯಾಜಕ 16
ಯಾಜಕಕಾಂಡ 17 / ಯಾಜಕ 17
ಯಾಜಕಕಾಂಡ 18 / ಯಾಜಕ 18
ಯಾಜಕಕಾಂಡ 19 / ಯಾಜಕ 19
ಯಾಜಕಕಾಂಡ 20 / ಯಾಜಕ 20
ಯಾಜಕಕಾಂಡ 21 / ಯಾಜಕ 21
ಯಾಜಕಕಾಂಡ 22 / ಯಾಜಕ 22
ಯಾಜಕಕಾಂಡ 23 / ಯಾಜಕ 23
ಯಾಜಕಕಾಂಡ 24 / ಯಾಜಕ 24
ಯಾಜಕಕಾಂಡ 25 / ಯಾಜಕ 25
ಯಾಜಕಕಾಂಡ 26 / ಯಾಜಕ 26
ಯಾಜಕಕಾಂಡ 27 / ಯಾಜಕ 27