೧ |
ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು: |
೨ |
ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ. |
೩ |
ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ. |
೪ |
ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು. |
೫ |
ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು. |
೬ |
ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ. |
೭ |
ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ. |
೮ |
ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ. |
೯ |
ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ. |
೧೦ |
ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ. |
೧೧ |
ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ. |
೧೨ |
ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ. |
೧೩ |
ಆ ಶತ್ರು ನಿಮ್ಮ ಮೇಲೆ ಹೇರಿದ ನೊಗವನ್ನು ಈಗ ನಿಮ್ಮಿಂದ ತೆಗೆದು ಮುರಿದುಬಿಡುವೆನು. ನಿಮ್ಮ ಸಂಕೋಲೆಗಳನ್ನು ಕಿತ್ತುಹಾಕುವೆನು.” |
೧೪ |
ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.” |
೧೫ |
ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!
|
Kannada Bible (KNCL) 2016 |
No Data |
|
|
|
|
|
|
|
|
|
|
ನಹೂಮನ ೧:1 |
ನಹೂಮನ ೧:2 |
ನಹೂಮನ ೧:3 |
ನಹೂಮನ ೧:4 |
ನಹೂಮನ ೧:5 |
ನಹೂಮನ ೧:6 |
ನಹೂಮನ ೧:7 |
ನಹೂಮನ ೧:8 |
ನಹೂಮನ ೧:9 |
ನಹೂಮನ ೧:10 |
ನಹೂಮನ ೧:11 |
ನಹೂಮನ ೧:12 |
ನಹೂಮನ ೧:13 |
ನಹೂಮನ ೧:14 |
ನಹೂಮನ ೧:15 |
|
|
|
|
|
|
ನಹೂಮನ 1 / ನಹ 1 |
ನಹೂಮನ 2 / ನಹ 2 |
ನಹೂಮನ 3 / ನಹ 3 |