೧ |
ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು. |
೨ |
“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು. |
೩ |
ಹೀಗಿರಲು ಆ ಹೆಣ್ಣುಮಕ್ಕಳು ಇಸ್ರಯೇಲರ ಬೇರೆ ಕುಲದವರಿಗೆ ಮದುವೆಯಾದರೆ ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುತ್ತದೆ. ಇದರಿಂದ ನಮ್ಮ ಸೊತ್ತಿಗೆ ನಷ್ಟ ಉಂಟಾಗುತ್ತದೆ. |
೪ |
ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು. |
೫ |
ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು. |
೬ |
ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ. |
೭ |
ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು. |
೮ |
ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು. |
೯ |
ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು. |
೧೦ |
“ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೋಗ್ಲಾ, ಮಿಲ್ಕಾ ಹಾಗು ನೋವಾ ಎಂಬವರು ಸರ್ವೇಶ್ವರನ ಆಜ್ಞಾನುಸಾರ ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು. |
೧೧ |
*** |
೧೨ |
ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು. |
೧೩ |
ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
|
Kannada Bible (KNCL) 2016 |
No Data |