೧ |
ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು. |
೨ |
ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು. |
೩ |
ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?\ ಎಂದು ಯೇಸುವನ್ನು ಕೇಳಿದರು. |
೪ |
ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ. |
೫ |
ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. |
೬ |
ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು. |
೭ |
ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ? |
೮ |
ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. |
೯ |
ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ. |
೧೦ |
‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ. |
೧೧ |
ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ. |
೧೨ |
ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. |
೧೩ |
ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. |
೧೪ |
ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. |
೧೫ |
ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. |
೧೬ |
“ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? |
೧೭ |
ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. |
೧೮ |
ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು. |
೧೯ |
ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು. |
೨೦ |
ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು; |
೨೧ |
:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು. |
೨೨ |
ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. |
೨೩ |
ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. |
೨೪ |
ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು. |
೨೫ |
ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. |
೨೬ |
ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. |
೨೭ |
“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು. |
೨೮ |
“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. |
೨೯ |
ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. |
೩೦ |
ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು. |
Kannada Bible (KNCL) 2016 |
No Data |
ಮತ್ತಾಯನು ೧೧:1 |
ಮತ್ತಾಯನು ೧೧:2 |
ಮತ್ತಾಯನು ೧೧:3 |
ಮತ್ತಾಯನು ೧೧:4 |
ಮತ್ತಾಯನು ೧೧:5 |
ಮತ್ತಾಯನು ೧೧:6 |
ಮತ್ತಾಯನು ೧೧:7 |
ಮತ್ತಾಯನು ೧೧:8 |
ಮತ್ತಾಯನು ೧೧:9 |
ಮತ್ತಾಯನು ೧೧:10 |
ಮತ್ತಾಯನು ೧೧:11 |
ಮತ್ತಾಯನು ೧೧:12 |
ಮತ್ತಾಯನು ೧೧:13 |
ಮತ್ತಾಯನು ೧೧:14 |
ಮತ್ತಾಯನು ೧೧:15 |
ಮತ್ತಾಯನು ೧೧:16 |
ಮತ್ತಾಯನು ೧೧:17 |
ಮತ್ತಾಯನು ೧೧:18 |
ಮತ್ತಾಯನು ೧೧:19 |
ಮತ್ತಾಯನು ೧೧:20 |
ಮತ್ತಾಯನು ೧೧:21 |
ಮತ್ತಾಯನು ೧೧:22 |
ಮತ್ತಾಯನು ೧೧:23 |
ಮತ್ತಾಯನು ೧೧:24 |
ಮತ್ತಾಯನು ೧೧:25 |
ಮತ್ತಾಯನು ೧೧:26 |
ಮತ್ತಾಯನು ೧೧:27 |
ಮತ್ತಾಯನು ೧೧:28 |
ಮತ್ತಾಯನು ೧೧:29 |
ಮತ್ತಾಯನು ೧೧:30 |
ಮತ್ತಾಯನು 1 / ಮತ್ತ 1 |
ಮತ್ತಾಯನು 2 / ಮತ್ತ 2 |
ಮತ್ತಾಯನು 3 / ಮತ್ತ 3 |
ಮತ್ತಾಯನು 4 / ಮತ್ತ 4 |
ಮತ್ತಾಯನು 5 / ಮತ್ತ 5 |
ಮತ್ತಾಯನು 6 / ಮತ್ತ 6 |
ಮತ್ತಾಯನು 7 / ಮತ್ತ 7 |
ಮತ್ತಾಯನು 8 / ಮತ್ತ 8 |
ಮತ್ತಾಯನು 9 / ಮತ್ತ 9 |
ಮತ್ತಾಯನು 10 / ಮತ್ತ 10 |
ಮತ್ತಾಯನು 11 / ಮತ್ತ 11 |
ಮತ್ತಾಯನು 12 / ಮತ್ತ 12 |
ಮತ್ತಾಯನು 13 / ಮತ್ತ 13 |
ಮತ್ತಾಯನು 14 / ಮತ್ತ 14 |
ಮತ್ತಾಯನು 15 / ಮತ್ತ 15 |
ಮತ್ತಾಯನು 16 / ಮತ್ತ 16 |
ಮತ್ತಾಯನು 17 / ಮತ್ತ 17 |
ಮತ್ತಾಯನು 18 / ಮತ್ತ 18 |
ಮತ್ತಾಯನು 19 / ಮತ್ತ 19 |
ಮತ್ತಾಯನು 20 / ಮತ್ತ 20 |
ಮತ್ತಾಯನು 21 / ಮತ್ತ 21 |
ಮತ್ತಾಯನು 22 / ಮತ್ತ 22 |
ಮತ್ತಾಯನು 23 / ಮತ್ತ 23 |
ಮತ್ತಾಯನು 24 / ಮತ್ತ 24 |
ಮತ್ತಾಯನು 25 / ಮತ್ತ 25 |
ಮತ್ತಾಯನು 26 / ಮತ್ತ 26 |
ಮತ್ತಾಯನು 27 / ಮತ್ತ 27 |
ಮತ್ತಾಯನು 28 / ಮತ್ತ 28 |
|
|
|
|
|