A A A A A
×

ಕನ್ನಡ ಬೈಬಲ್ (KNCL) 2016

ಮತ್ತಾಯನು ೧೩

ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.
ಜನರು ತಂಡೋಪತಂಡವಾಗಿ ಕೂಡಿಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು.
ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:
“ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.
ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.
ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.
ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು.
ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.
ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.
೧೦
ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.
೧೧
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.
೧೨
ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.
೧೩
ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.
೧೪
ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು
೧೫
ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’
೧೬
“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.
೧೭
ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.
೧೮
“ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:
೧೯
ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.
೨೦
ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.
೨೧
ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.
೨೨
ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.
೨೩
ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.
೨೪
ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.
೨೫
ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.
೨೬
ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.
೨೭
ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.
೨೮
ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.
೨೯
ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.
೩೦
ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”
೩೧
ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.
೩೨
ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”
೩೩
ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”
೩೪
ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.
೩೫
“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.
೩೬
ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.
೩೭
ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು;
೩೮
ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.
೩೯
ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.
೪೦
ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.
೪೧
ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ
೪೨
ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.
೪೩
ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!
೪೪
“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.
೪೫
“ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.
೪೬
ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.
೪೭
“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.
೪೮
ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.
೪೯
ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.
೫೦
ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”
೫೧
“ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.
೫೨
ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.
೫೩
ಈ ಸಾಮತಿಗಳನ್ನು ಹೇಳಿಯಾದಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.
೫೪
ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?
೫೫
ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?
೫೬
ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.
೫೭
ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.
೫೮
ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.
ಮತ್ತಾಯನು ೧೩:1
ಮತ್ತಾಯನು ೧೩:2
ಮತ್ತಾಯನು ೧೩:3
ಮತ್ತಾಯನು ೧೩:4
ಮತ್ತಾಯನು ೧೩:5
ಮತ್ತಾಯನು ೧೩:6
ಮತ್ತಾಯನು ೧೩:7
ಮತ್ತಾಯನು ೧೩:8
ಮತ್ತಾಯನು ೧೩:9
ಮತ್ತಾಯನು ೧೩:10
ಮತ್ತಾಯನು ೧೩:11
ಮತ್ತಾಯನು ೧೩:12
ಮತ್ತಾಯನು ೧೩:13
ಮತ್ತಾಯನು ೧೩:14
ಮತ್ತಾಯನು ೧೩:15
ಮತ್ತಾಯನು ೧೩:16
ಮತ್ತಾಯನು ೧೩:17
ಮತ್ತಾಯನು ೧೩:18
ಮತ್ತಾಯನು ೧೩:19
ಮತ್ತಾಯನು ೧೩:20
ಮತ್ತಾಯನು ೧೩:21
ಮತ್ತಾಯನು ೧೩:22
ಮತ್ತಾಯನು ೧೩:23
ಮತ್ತಾಯನು ೧೩:24
ಮತ್ತಾಯನು ೧೩:25
ಮತ್ತಾಯನು ೧೩:26
ಮತ್ತಾಯನು ೧೩:27
ಮತ್ತಾಯನು ೧೩:28
ಮತ್ತಾಯನು ೧೩:29
ಮತ್ತಾಯನು ೧೩:30
ಮತ್ತಾಯನು ೧೩:31
ಮತ್ತಾಯನು ೧೩:32
ಮತ್ತಾಯನು ೧೩:33
ಮತ್ತಾಯನು ೧೩:34
ಮತ್ತಾಯನು ೧೩:35
ಮತ್ತಾಯನು ೧೩:36
ಮತ್ತಾಯನು ೧೩:37
ಮತ್ತಾಯನು ೧೩:38
ಮತ್ತಾಯನು ೧೩:39
ಮತ್ತಾಯನು ೧೩:40
ಮತ್ತಾಯನು ೧೩:41
ಮತ್ತಾಯನು ೧೩:42
ಮತ್ತಾಯನು ೧೩:43
ಮತ್ತಾಯನು ೧೩:44
ಮತ್ತಾಯನು ೧೩:45
ಮತ್ತಾಯನು ೧೩:46
ಮತ್ತಾಯನು ೧೩:47
ಮತ್ತಾಯನು ೧೩:48
ಮತ್ತಾಯನು ೧೩:49
ಮತ್ತಾಯನು ೧೩:50
ಮತ್ತಾಯನು ೧೩:51
ಮತ್ತಾಯನು ೧೩:52
ಮತ್ತಾಯನು ೧೩:53
ಮತ್ತಾಯನು ೧೩:54
ಮತ್ತಾಯನು ೧೩:55
ಮತ್ತಾಯನು ೧೩:56
ಮತ್ತಾಯನು ೧೩:57
ಮತ್ತಾಯನು ೧೩:58
ಮತ್ತಾಯನು 1 / ಮತ್ತ 1
ಮತ್ತಾಯನು 2 / ಮತ್ತ 2
ಮತ್ತಾಯನು 3 / ಮತ್ತ 3
ಮತ್ತಾಯನು 4 / ಮತ್ತ 4
ಮತ್ತಾಯನು 5 / ಮತ್ತ 5
ಮತ್ತಾಯನು 6 / ಮತ್ತ 6
ಮತ್ತಾಯನು 7 / ಮತ್ತ 7
ಮತ್ತಾಯನು 8 / ಮತ್ತ 8
ಮತ್ತಾಯನು 9 / ಮತ್ತ 9
ಮತ್ತಾಯನು 10 / ಮತ್ತ 10
ಮತ್ತಾಯನು 11 / ಮತ್ತ 11
ಮತ್ತಾಯನು 12 / ಮತ್ತ 12
ಮತ್ತಾಯನು 13 / ಮತ್ತ 13
ಮತ್ತಾಯನು 14 / ಮತ್ತ 14
ಮತ್ತಾಯನು 15 / ಮತ್ತ 15
ಮತ್ತಾಯನು 16 / ಮತ್ತ 16
ಮತ್ತಾಯನು 17 / ಮತ್ತ 17
ಮತ್ತಾಯನು 18 / ಮತ್ತ 18
ಮತ್ತಾಯನು 19 / ಮತ್ತ 19
ಮತ್ತಾಯನು 20 / ಮತ್ತ 20
ಮತ್ತಾಯನು 21 / ಮತ್ತ 21
ಮತ್ತಾಯನು 22 / ಮತ್ತ 22
ಮತ್ತಾಯನು 23 / ಮತ್ತ 23
ಮತ್ತಾಯನು 24 / ಮತ್ತ 24
ಮತ್ತಾಯನು 25 / ಮತ್ತ 25
ಮತ್ತಾಯನು 26 / ಮತ್ತ 26
ಮತ್ತಾಯನು 27 / ಮತ್ತ 27
ಮತ್ತಾಯನು 28 / ಮತ್ತ 28