೧ |
“ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. |
೨ |
ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. |
೩ |
ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? |
೪ |
ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? |
೫ |
ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.” |
೬ |
“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.” |
೭ |
“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. |
೮ |
ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. |
೯ |
ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು? |
೧೦ |
ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು? |
೧೧ |
ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!” |
೧೨ |
“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.” |
೧೩ |
“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. |
೧೪ |
ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.” |
೧೫ |
“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು. |
೧೬ |
ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? |
೧೭ |
ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. |
೧೮ |
ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. |
೧೯ |
ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. |
೨೦ |
ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.” |
೨೧ |
“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. |
೨೨ |
ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು. |
೨೩ |
ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.” |
೨೪ |
“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. |
೨೫ |
ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. |
೨೬ |
ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. |
೨೭ |
ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!” |
೨೮ |
ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು. |
೨೯ |
ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು. |
Kannada Bible (KNCL) 2016 |
No Data |
ಮತ್ತಾಯನು ೭:1 |
ಮತ್ತಾಯನು ೭:2 |
ಮತ್ತಾಯನು ೭:3 |
ಮತ್ತಾಯನು ೭:4 |
ಮತ್ತಾಯನು ೭:5 |
ಮತ್ತಾಯನು ೭:6 |
ಮತ್ತಾಯನು ೭:7 |
ಮತ್ತಾಯನು ೭:8 |
ಮತ್ತಾಯನು ೭:9 |
ಮತ್ತಾಯನು ೭:10 |
ಮತ್ತಾಯನು ೭:11 |
ಮತ್ತಾಯನು ೭:12 |
ಮತ್ತಾಯನು ೭:13 |
ಮತ್ತಾಯನು ೭:14 |
ಮತ್ತಾಯನು ೭:15 |
ಮತ್ತಾಯನು ೭:16 |
ಮತ್ತಾಯನು ೭:17 |
ಮತ್ತಾಯನು ೭:18 |
ಮತ್ತಾಯನು ೭:19 |
ಮತ್ತಾಯನು ೭:20 |
ಮತ್ತಾಯನು ೭:21 |
ಮತ್ತಾಯನು ೭:22 |
ಮತ್ತಾಯನು ೭:23 |
ಮತ್ತಾಯನು ೭:24 |
ಮತ್ತಾಯನು ೭:25 |
ಮತ್ತಾಯನು ೭:26 |
ಮತ್ತಾಯನು ೭:27 |
ಮತ್ತಾಯನು ೭:28 |
ಮತ್ತಾಯನು ೭:29 |
ಮತ್ತಾಯನು 1 / ಮತ್ತ 1 |
ಮತ್ತಾಯನು 2 / ಮತ್ತ 2 |
ಮತ್ತಾಯನು 3 / ಮತ್ತ 3 |
ಮತ್ತಾಯನು 4 / ಮತ್ತ 4 |
ಮತ್ತಾಯನು 5 / ಮತ್ತ 5 |
ಮತ್ತಾಯನು 6 / ಮತ್ತ 6 |
ಮತ್ತಾಯನು 7 / ಮತ್ತ 7 |
ಮತ್ತಾಯನು 8 / ಮತ್ತ 8 |
ಮತ್ತಾಯನು 9 / ಮತ್ತ 9 |
ಮತ್ತಾಯನು 10 / ಮತ್ತ 10 |
ಮತ್ತಾಯನು 11 / ಮತ್ತ 11 |
ಮತ್ತಾಯನು 12 / ಮತ್ತ 12 |
ಮತ್ತಾಯನು 13 / ಮತ್ತ 13 |
ಮತ್ತಾಯನು 14 / ಮತ್ತ 14 |
ಮತ್ತಾಯನು 15 / ಮತ್ತ 15 |
ಮತ್ತಾಯನು 16 / ಮತ್ತ 16 |
ಮತ್ತಾಯನು 17 / ಮತ್ತ 17 |
ಮತ್ತಾಯನು 18 / ಮತ್ತ 18 |
ಮತ್ತಾಯನು 19 / ಮತ್ತ 19 |
ಮತ್ತಾಯನು 20 / ಮತ್ತ 20 |
ಮತ್ತಾಯನು 21 / ಮತ್ತ 21 |
ಮತ್ತಾಯನು 22 / ಮತ್ತ 22 |
ಮತ್ತಾಯನು 23 / ಮತ್ತ 23 |
ಮತ್ತಾಯನು 24 / ಮತ್ತ 24 |
ಮತ್ತಾಯನು 25 / ಮತ್ತ 25 |
ಮತ್ತಾಯನು 26 / ಮತ್ತ 26 |
ಮತ್ತಾಯನು 27 / ಮತ್ತ 27 |
ಮತ್ತಾಯನು 28 / ಮತ್ತ 28 |
|
|
|
|
|