A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಮಾರ್ಕನು ೫ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.
ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.
ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.
ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ.
ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.
ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,
“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.
ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.
“ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.
೧೦
ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
೧೧
ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು.
೧೨
ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.
೧೩
ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.
೧೪
ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.
೧೫
ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.
೧೬
ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು.
೧೭
ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.
೧೮
ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.
೧೯
ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು.
೨೦
ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.
೨೧
ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.
೨೨
ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.
೨೩
ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.
೨೪
ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.
೨೫
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.
೨೬
ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
೨೭
ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.
೨೮
“ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು,” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು.
೨೯
ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.
೩೦
ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.
೩೧
ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.
೩೨
ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು.
೩೩
ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.
೩೪
ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.
೩೫
ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.
೩೬
ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.
೩೭
ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.
೩೮
ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.
೩೯
ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.
೪೦
ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.
೪೧
ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).
೪೨
ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.
೪೩
ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.ಮಾರ್ಕನು ೫:1
ಮಾರ್ಕನು ೫:2
ಮಾರ್ಕನು ೫:3
ಮಾರ್ಕನು ೫:4
ಮಾರ್ಕನು ೫:5
ಮಾರ್ಕನು ೫:6
ಮಾರ್ಕನು ೫:7
ಮಾರ್ಕನು ೫:8
ಮಾರ್ಕನು ೫:9
ಮಾರ್ಕನು ೫:10
ಮಾರ್ಕನು ೫:11
ಮಾರ್ಕನು ೫:12
ಮಾರ್ಕನು ೫:13
ಮಾರ್ಕನು ೫:14
ಮಾರ್ಕನು ೫:15
ಮಾರ್ಕನು ೫:16
ಮಾರ್ಕನು ೫:17
ಮಾರ್ಕನು ೫:18
ಮಾರ್ಕನು ೫:19
ಮಾರ್ಕನು ೫:20
ಮಾರ್ಕನು ೫:21
ಮಾರ್ಕನು ೫:22
ಮಾರ್ಕನು ೫:23
ಮಾರ್ಕನು ೫:24
ಮಾರ್ಕನು ೫:25
ಮಾರ್ಕನು ೫:26
ಮಾರ್ಕನು ೫:27
ಮಾರ್ಕನು ೫:28
ಮಾರ್ಕನು ೫:29
ಮಾರ್ಕನು ೫:30
ಮಾರ್ಕನು ೫:31
ಮಾರ್ಕನು ೫:32
ಮಾರ್ಕನು ೫:33
ಮಾರ್ಕನು ೫:34
ಮಾರ್ಕನು ೫:35
ಮಾರ್ಕನು ೫:36
ಮಾರ್ಕನು ೫:37
ಮಾರ್ಕನು ೫:38
ಮಾರ್ಕನು ೫:39
ಮಾರ್ಕನು ೫:40
ಮಾರ್ಕನು ೫:41
ಮಾರ್ಕನು ೫:42
ಮಾರ್ಕನು ೫:43


ಮಾರ್ಕನು 1 / ಮಾರ 1
ಮಾರ್ಕನು 2 / ಮಾರ 2
ಮಾರ್ಕನು 3 / ಮಾರ 3
ಮಾರ್ಕನು 4 / ಮಾರ 4
ಮಾರ್ಕನು 5 / ಮಾರ 5
ಮಾರ್ಕನು 6 / ಮಾರ 6
ಮಾರ್ಕನು 7 / ಮಾರ 7
ಮಾರ್ಕನು 8 / ಮಾರ 8
ಮಾರ್ಕನು 9 / ಮಾರ 9
ಮಾರ್ಕನು 10 / ಮಾರ 10
ಮಾರ್ಕನು 11 / ಮಾರ 11
ಮಾರ್ಕನು 12 / ಮಾರ 12
ಮಾರ್ಕನು 13 / ಮಾರ 13
ಮಾರ್ಕನು 14 / ಮಾರ 14
ಮಾರ್ಕನು 15 / ಮಾರ 15
ಮಾರ್ಕನು 16 / ಮಾರ 16