A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಮಾರ್ಕನು ೬ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು.
ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?
ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.
ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.
ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.
ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.
ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.
ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ.
ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆಮಾಡಿದರು.
೧೦
ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.
೧೧
ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.
೧೨
ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.
೧೩
ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.
೧೪
ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.
೧೫
ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.
೧೬
ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.
೧೭
ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.
೧೮
ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.
೧೯
ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.
೨೦
ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.
೨೧
ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.
೨೨
ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.
೨೩
ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.
೨೪
ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.
೨೫
ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.
೨೬
ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
೨೭
ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.
೨೮
ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು.
೨೯
ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.
೩೦
ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.
೩೧
ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ.
೩೨
ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.
೩೩
ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.
೩೪
ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
೩೫
ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು,
೩೬
“ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು.
೩೭
ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.
೩೮
ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ತಿಳಿಸಿದರು.
೩೯
ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು.
೪೦
ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.
೪೧
ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.
೪೨
ಎಲ್ಲರೂ ಹೊಟ್ಟೆತುಂಬಾ ತಿಂದು ತೃಪ್ತರಾದರು.
೪೩
ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು.
೪೪
ಊಟಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ.
೪೫
ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.
೪೬
ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.
೪೭
ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.
೪೮
ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.
೪೯
ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.
೫೦
ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು.
೫೧
ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.
೫೨
ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.
೫೩
ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.
೫೪
ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.
೫೫
ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.
೫೬
ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.ಮಾರ್ಕನು ೬:1

ಮಾರ್ಕನು ೬:2

ಮಾರ್ಕನು ೬:3

ಮಾರ್ಕನು ೬:4

ಮಾರ್ಕನು ೬:5

ಮಾರ್ಕನು ೬:6

ಮಾರ್ಕನು ೬:7

ಮಾರ್ಕನು ೬:8

ಮಾರ್ಕನು ೬:9

ಮಾರ್ಕನು ೬:10

ಮಾರ್ಕನು ೬:11

ಮಾರ್ಕನು ೬:12

ಮಾರ್ಕನು ೬:13

ಮಾರ್ಕನು ೬:14

ಮಾರ್ಕನು ೬:15

ಮಾರ್ಕನು ೬:16

ಮಾರ್ಕನು ೬:17

ಮಾರ್ಕನು ೬:18

ಮಾರ್ಕನು ೬:19

ಮಾರ್ಕನು ೬:20

ಮಾರ್ಕನು ೬:21

ಮಾರ್ಕನು ೬:22

ಮಾರ್ಕನು ೬:23

ಮಾರ್ಕನು ೬:24

ಮಾರ್ಕನು ೬:25

ಮಾರ್ಕನು ೬:26

ಮಾರ್ಕನು ೬:27

ಮಾರ್ಕನು ೬:28

ಮಾರ್ಕನು ೬:29

ಮಾರ್ಕನು ೬:30

ಮಾರ್ಕನು ೬:31

ಮಾರ್ಕನು ೬:32

ಮಾರ್ಕನು ೬:33

ಮಾರ್ಕನು ೬:34

ಮಾರ್ಕನು ೬:35

ಮಾರ್ಕನು ೬:36

ಮಾರ್ಕನು ೬:37

ಮಾರ್ಕನು ೬:38

ಮಾರ್ಕನು ೬:39

ಮಾರ್ಕನು ೬:40

ಮಾರ್ಕನು ೬:41

ಮಾರ್ಕನು ೬:42

ಮಾರ್ಕನು ೬:43

ಮಾರ್ಕನು ೬:44

ಮಾರ್ಕನು ೬:45

ಮಾರ್ಕನು ೬:46

ಮಾರ್ಕನು ೬:47

ಮಾರ್ಕನು ೬:48

ಮಾರ್ಕನು ೬:49

ಮಾರ್ಕನು ೬:50

ಮಾರ್ಕನು ೬:51

ಮಾರ್ಕನು ೬:52

ಮಾರ್ಕನು ೬:53

ಮಾರ್ಕನು ೬:54

ಮಾರ್ಕನು ೬:55

ಮಾರ್ಕನು ೬:56ಮಾರ್ಕನು 1 / ಮಾರ 1

ಮಾರ್ಕನು 2 / ಮಾರ 2

ಮಾರ್ಕನು 3 / ಮಾರ 3

ಮಾರ್ಕನು 4 / ಮಾರ 4

ಮಾರ್ಕನು 5 / ಮಾರ 5

ಮಾರ್ಕನು 6 / ಮಾರ 6

ಮಾರ್ಕನು 7 / ಮಾರ 7

ಮಾರ್ಕನು 8 / ಮಾರ 8

ಮಾರ್ಕನು 9 / ಮಾರ 9

ಮಾರ್ಕನು 10 / ಮಾರ 10

ಮಾರ್ಕನು 11 / ಮಾರ 11

ಮಾರ್ಕನು 12 / ಮಾರ 12

ಮಾರ್ಕನು 13 / ಮಾರ 13

ಮಾರ್ಕನು 14 / ಮಾರ 14

ಮಾರ್ಕನು 15 / ಮಾರ 15

ಮಾರ್ಕನು 16 / ಮಾರ 16