೧ |
ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. |
೨ |
ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. |
೩ |
ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು. |
೪ |
“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. |
೫ |
ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ. |
೬ |
“ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. |
೭ |
ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. |
೮ |
“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. |
೯ |
ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ. |
೧೦ |
“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. |
೧೧ |
“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. |
೧೨ |
ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು. |
೧೩ |
ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು. |
೧೪ |
ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು. |
೧೫ |
ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು. |
೧೬ |
ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು. |
೧೭ |
ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ, |
೧೮ |
‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ. |
೧೯ |
ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ\,’ ಎಂದುಕೊಂಡ. |
೨೦ |
ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು. |
೨೧ |
“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು. |
೨೨ |
ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. |
೨೩ |
ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು. |
೨೪ |
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು! |
೨೫ |
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? |
೨೬ |
ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ? |
೨೭ |
ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. |
೨೮ |
ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು! |
೨೯ |
ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ. |
೩೦ |
ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. |
೩೧ |
ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು. |
೩೨ |
“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ. |
೩೩ |
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ. |
೩೪ |
ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ. |
೩೫ |
“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. |
೩೬ |
ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. |
೩೭ |
ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. |
೩೮ |
“ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು. |
೩೯ |
ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. |
೪೦ |
ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. |
೪೧ |
ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು. |
೪೨ |
ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. |
೪೩ |
ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. |
೪೪ |
ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. |
೪೫ |
“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ |
೪೬ |
ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. |
೪೭ |
“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. |
೪೮ |
ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು. |
೪೯ |
“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. |
೫೦ |
ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. |
೫೧ |
ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. |
೫೨ |
ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. |
೫೩ |
ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು. |
೫೪ |
ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ. |
೫೫ |
ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ. |
೫೬ |
ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ? |
೫೭ |
“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? |
೫೮ |
ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು. |
೫೯ |
ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು. |
Kannada Bible (KNCL) 2016 |
No Data |
ಲೂಕನು ೧೨:1 |
ಲೂಕನು ೧೨:2 |
ಲೂಕನು ೧೨:3 |
ಲೂಕನು ೧೨:4 |
ಲೂಕನು ೧೨:5 |
ಲೂಕನು ೧೨:6 |
ಲೂಕನು ೧೨:7 |
ಲೂಕನು ೧೨:8 |
ಲೂಕನು ೧೨:9 |
ಲೂಕನು ೧೨:10 |
ಲೂಕನು ೧೨:11 |
ಲೂಕನು ೧೨:12 |
ಲೂಕನು ೧೨:13 |
ಲೂಕನು ೧೨:14 |
ಲೂಕನು ೧೨:15 |
ಲೂಕನು ೧೨:16 |
ಲೂಕನು ೧೨:17 |
ಲೂಕನು ೧೨:18 |
ಲೂಕನು ೧೨:19 |
ಲೂಕನು ೧೨:20 |
ಲೂಕನು ೧೨:21 |
ಲೂಕನು ೧೨:22 |
ಲೂಕನು ೧೨:23 |
ಲೂಕನು ೧೨:24 |
ಲೂಕನು ೧೨:25 |
ಲೂಕನು ೧೨:26 |
ಲೂಕನು ೧೨:27 |
ಲೂಕನು ೧೨:28 |
ಲೂಕನು ೧೨:29 |
ಲೂಕನು ೧೨:30 |
ಲೂಕನು ೧೨:31 |
ಲೂಕನು ೧೨:32 |
ಲೂಕನು ೧೨:33 |
ಲೂಕನು ೧೨:34 |
ಲೂಕನು ೧೨:35 |
ಲೂಕನು ೧೨:36 |
ಲೂಕನು ೧೨:37 |
ಲೂಕನು ೧೨:38 |
ಲೂಕನು ೧೨:39 |
ಲೂಕನು ೧೨:40 |
ಲೂಕನು ೧೨:41 |
ಲೂಕನು ೧೨:42 |
ಲೂಕನು ೧೨:43 |
ಲೂಕನು ೧೨:44 |
ಲೂಕನು ೧೨:45 |
ಲೂಕನು ೧೨:46 |
ಲೂಕನು ೧೨:47 |
ಲೂಕನು ೧೨:48 |
ಲೂಕನು ೧೨:49 |
ಲೂಕನು ೧೨:50 |
ಲೂಕನು ೧೨:51 |
ಲೂಕನು ೧೨:52 |
ಲೂಕನು ೧೨:53 |
ಲೂಕನು ೧೨:54 |
ಲೂಕನು ೧೨:55 |
ಲೂಕನು ೧೨:56 |
ಲೂಕನು ೧೨:57 |
ಲೂಕನು ೧೨:58 |
ಲೂಕನು ೧೨:59 |
ಲೂಕನು 1 / ಲೂಕ 1 |
ಲೂಕನು 2 / ಲೂಕ 2 |
ಲೂಕನು 3 / ಲೂಕ 3 |
ಲೂಕನು 4 / ಲೂಕ 4 |
ಲೂಕನು 5 / ಲೂಕ 5 |
ಲೂಕನು 6 / ಲೂಕ 6 |
ಲೂಕನು 7 / ಲೂಕ 7 |
ಲೂಕನು 8 / ಲೂಕ 8 |
ಲೂಕನು 9 / ಲೂಕ 9 |
ಲೂಕನು 10 / ಲೂಕ 10 |
ಲೂಕನು 11 / ಲೂಕ 11 |
ಲೂಕನು 12 / ಲೂಕ 12 |
ಲೂಕನು 13 / ಲೂಕ 13 |
ಲೂಕನು 14 / ಲೂಕ 14 |
ಲೂಕನು 15 / ಲೂಕ 15 |
ಲೂಕನು 16 / ಲೂಕ 16 |
ಲೂಕನು 17 / ಲೂಕ 17 |
ಲೂಕನು 18 / ಲೂಕ 18 |
ಲೂಕನು 19 / ಲೂಕ 19 |
ಲೂಕನು 20 / ಲೂಕ 20 |
ಲೂಕನು 21 / ಲೂಕ 21 |
ಲೂಕನು 22 / ಲೂಕ 22 |
ಲೂಕನು 23 / ಲೂಕ 23 |
ಲೂಕನು 24 / ಲೂಕ 24 |