೧ |
ಬಳಿಕ ಸಭೆಸೇರಿದ್ದವರೆಲ್ಲರೂ ಎದ್ದು ಯೇಸುಸ್ವಾಮಿಯನ್ನು ಪಿಲಾತನ ಬಳಿಗೆ ಕರೆದುತಂದರು. |
೨ |
ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು. |
೩ |
ಆಗ ಪಿಲಾತನು, “ನೀನು ಯೆಹೂದ್ಯರ ಅರಸನೋ?” ಎಂದು ಯೇಸುವನ್ನು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು. |
೪ |
ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು. |
೫ |
ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು. |
೬ |
ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು. |
೭ |
ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು. |
೮ |
ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು. |
೯ |
ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ. |
೧೦ |
ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು. |
೧೧ |
ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು. |
೧೨ |
ಅದುವರೆಗೂ ಪರಸ್ಪರ ವೈರಿಗಳಾಗಿದ್ದ ಹೆರೋದನು ಮತ್ತು ಪಿಲಾತನು ಅಂದೇ ಮಿತ್ರರಾದರು. |
೧೩ |
ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ, |
೧೪ |
“ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ; |
೧೫ |
ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ. |
೧೬ |
ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. |
೧೭ |
(ಪಾಸ್ಕಹಬ್ಬದ ಸಂದರ್ಭದಲ್ಲಿ ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಪಿಲಾತನು ಬಿಡುಗಡೆ ಮಾಡಬೇಕಾಗಿತ್ತು). |
೧೮ |
ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು. |
೧೯ |
ನಗರದಲ್ಲಿ ದಂಗೆ ಎಬ್ಬಿಸಿದ ಹಾಗೂ ಕೊಲೆಮಾಡಿದ ಕಾರಣ ಸೆರೆಯಲ್ಲಿ ಹಾಕಲಾಗಿದ್ದ ಬರಬ್ಬನೇ ಅವನು. |
೨೦ |
ಪಿಲಾತನು ಯೇಸುಸ್ವಾಮಿಯನ್ನು ಬಿಡುಗಡೆ ಮಾಡಬಯಸಿ ಮತ್ತೊಮ್ಮೆ ಜನರೊಡನೆ ಮಾತನಾಡಿ ನೋಡಿದನು. |
೨೧ |
ಅವರಾದರೋ, “ಇವನನ್ನು ಶಿಲುಬೆಗೇರಿಸಿ, ಇವನನ್ನು ಶಿಲುಬೆಗೇರಿಸಿ,” ಎಂದು ಆರ್ಭಟಿಸತೊಡಗಿದರು. |
೨೨ |
ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. |
೨೩ |
ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು! |
೨೪ |
ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು. |
೨೫ |
ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು. |
೨೬ |
ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು. |
೨೭ |
ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು. |
೨೮ |
ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ. |
೨೯ |
ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು. |
೩೦ |
ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು. |
೩೧ |
ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು. |
೩೨ |
ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು. |
೩೩ |
‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು. |
೩೪ |
ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು. |
೩೫ |
ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು. |
೩೬ |
ಸೈನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ, |
೩೭ |
“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೊ,” ಎಂದು ಅಣಕಿಸುತ್ತಿದ್ದರು. |
೩೮ |
ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು. |
೩೯ |
ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು. |
೪೦ |
ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ; |
೪೧ |
ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು. |
೪೨ |
ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು. |
೪೩ |
ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು. |
೪೪ |
ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. |
೪೫ |
ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು. |
೪೬ |
ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು. |
೪೭ |
ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು. |
೪೮ |
ಈ ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು. |
೪೯ |
ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು. |
೫೦ |
ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ. |
೫೧ |
*** |
೫೨ |
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಕೇಳಿಕೊಂಡನು. |
೫೩ |
ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ. |
೫೪ |
ಅಂದು ಶುಕ್ರವಾರ - ಸಿದ್ಧತೆಯ ದಿನ. ಇನ್ನೇನು ಸಬ್ಬತ್ ಪ್ರಾರಂಭವಾಗುವುದರಲ್ಲಿತ್ತು. |
೫೫ |
ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು. |
೫೬ |
ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಲೂಕನು ೨೩:1 |
ಲೂಕನು ೨೩:2 |
ಲೂಕನು ೨೩:3 |
ಲೂಕನು ೨೩:4 |
ಲೂಕನು ೨೩:5 |
ಲೂಕನು ೨೩:6 |
ಲೂಕನು ೨೩:7 |
ಲೂಕನು ೨೩:8 |
ಲೂಕನು ೨೩:9 |
ಲೂಕನು ೨೩:10 |
ಲೂಕನು ೨೩:11 |
ಲೂಕನು ೨೩:12 |
ಲೂಕನು ೨೩:13 |
ಲೂಕನು ೨೩:14 |
ಲೂಕನು ೨೩:15 |
ಲೂಕನು ೨೩:16 |
ಲೂಕನು ೨೩:17 |
ಲೂಕನು ೨೩:18 |
ಲೂಕನು ೨೩:19 |
ಲೂಕನು ೨೩:20 |
ಲೂಕನು ೨೩:21 |
ಲೂಕನು ೨೩:22 |
ಲೂಕನು ೨೩:23 |
ಲೂಕನು ೨೩:24 |
ಲೂಕನು ೨೩:25 |
ಲೂಕನು ೨೩:26 |
ಲೂಕನು ೨೩:27 |
ಲೂಕನು ೨೩:28 |
ಲೂಕನು ೨೩:29 |
ಲೂಕನು ೨೩:30 |
ಲೂಕನು ೨೩:31 |
ಲೂಕನು ೨೩:32 |
ಲೂಕನು ೨೩:33 |
ಲೂಕನು ೨೩:34 |
ಲೂಕನು ೨೩:35 |
ಲೂಕನು ೨೩:36 |
ಲೂಕನು ೨೩:37 |
ಲೂಕನು ೨೩:38 |
ಲೂಕನು ೨೩:39 |
ಲೂಕನು ೨೩:40 |
ಲೂಕನು ೨೩:41 |
ಲೂಕನು ೨೩:42 |
ಲೂಕನು ೨೩:43 |
ಲೂಕನು ೨೩:44 |
ಲೂಕನು ೨೩:45 |
ಲೂಕನು ೨೩:46 |
ಲೂಕನು ೨೩:47 |
ಲೂಕನು ೨೩:48 |
ಲೂಕನು ೨೩:49 |
ಲೂಕನು ೨೩:50 |
ಲೂಕನು ೨೩:51 |
ಲೂಕನು ೨೩:52 |
ಲೂಕನು ೨೩:53 |
ಲೂಕನು ೨೩:54 |
ಲೂಕನು ೨೩:55 |
ಲೂಕನು ೨೩:56 |
|
|
|
|
|
|
ಲೂಕನು 1 / ಲೂಕ 1 |
ಲೂಕನು 2 / ಲೂಕ 2 |
ಲೂಕನು 3 / ಲೂಕ 3 |
ಲೂಕನು 4 / ಲೂಕ 4 |
ಲೂಕನು 5 / ಲೂಕ 5 |
ಲೂಕನು 6 / ಲೂಕ 6 |
ಲೂಕನು 7 / ಲೂಕ 7 |
ಲೂಕನು 8 / ಲೂಕ 8 |
ಲೂಕನು 9 / ಲೂಕ 9 |
ಲೂಕನು 10 / ಲೂಕ 10 |
ಲೂಕನು 11 / ಲೂಕ 11 |
ಲೂಕನು 12 / ಲೂಕ 12 |
ಲೂಕನು 13 / ಲೂಕ 13 |
ಲೂಕನು 14 / ಲೂಕ 14 |
ಲೂಕನು 15 / ಲೂಕ 15 |
ಲೂಕನು 16 / ಲೂಕ 16 |
ಲೂಕನು 17 / ಲೂಕ 17 |
ಲೂಕನು 18 / ಲೂಕ 18 |
ಲೂಕನು 19 / ಲೂಕ 19 |
ಲೂಕನು 20 / ಲೂಕ 20 |
ಲೂಕನು 21 / ಲೂಕ 21 |
ಲೂಕನು 22 / ಲೂಕ 22 |
ಲೂಕನು 23 / ಲೂಕ 23 |
ಲೂಕನು 24 / ಲೂಕ 24 |