೧ |
ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು. |
೨ |
ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು. |
೩ |
ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು. |
೪ |
ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು. |
೫ |
ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ, |
೬ |
“ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ. |
೭ |
ನೀನು ನನಗೆ ಅಡ್ಡಬಿದ್ದೆಯಾದರೆ ಇದೆಲ್ಲಾ ನಿನ್ನದಾಗುವುದು,” ಎಂದಿತು. |
೮ |
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು. |
೯ |
ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು. |
೧೦ |
ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು |
೧೧ |
‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು. |
೧೨ |
ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು. |
೧೩ |
ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು. |
೧೪ |
ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. |
೧೫ |
ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ! |
೧೬ |
ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, |
೧೭ |
ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: |
೧೮ |
“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ |
೧೯ |
ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” |
೨೦ |
ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. |
೨೧ |
ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. |
೨೨ |
ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು. |
೨೩ |
ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ. |
೨೪ |
ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. |
೨೫ |
ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. |
೨೬ |
ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. |
೨೭ |
ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. |
೨೮ |
ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. |
೨೯ |
ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. |
೩೦ |
ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು. |
೩೧ |
ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು. |
೩೨ |
ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. |
೩೩ |
ದುಷ್ಟದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು. |
೩೪ |
ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು. |
೩೫ |
ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು. |
೩೬ |
ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. |
೩೭ |
ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು. |
೩೮ |
ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. |
೩೯ |
ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. |
೪೦ |
ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು. |
೪೧ |
ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. |
೪೨ |
ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು. |
೪೩ |
ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು. |
೪೪ |
ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಲೂಕನು ೪:1 |
ಲೂಕನು ೪:2 |
ಲೂಕನು ೪:3 |
ಲೂಕನು ೪:4 |
ಲೂಕನು ೪:5 |
ಲೂಕನು ೪:6 |
ಲೂಕನು ೪:7 |
ಲೂಕನು ೪:8 |
ಲೂಕನು ೪:9 |
ಲೂಕನು ೪:10 |
ಲೂಕನು ೪:11 |
ಲೂಕನು ೪:12 |
ಲೂಕನು ೪:13 |
ಲೂಕನು ೪:14 |
ಲೂಕನು ೪:15 |
ಲೂಕನು ೪:16 |
ಲೂಕನು ೪:17 |
ಲೂಕನು ೪:18 |
ಲೂಕನು ೪:19 |
ಲೂಕನು ೪:20 |
ಲೂಕನು ೪:21 |
ಲೂಕನು ೪:22 |
ಲೂಕನು ೪:23 |
ಲೂಕನು ೪:24 |
ಲೂಕನು ೪:25 |
ಲೂಕನು ೪:26 |
ಲೂಕನು ೪:27 |
ಲೂಕನು ೪:28 |
ಲೂಕನು ೪:29 |
ಲೂಕನು ೪:30 |
ಲೂಕನು ೪:31 |
ಲೂಕನು ೪:32 |
ಲೂಕನು ೪:33 |
ಲೂಕನು ೪:34 |
ಲೂಕನು ೪:35 |
ಲೂಕನು ೪:36 |
ಲೂಕನು ೪:37 |
ಲೂಕನು ೪:38 |
ಲೂಕನು ೪:39 |
ಲೂಕನು ೪:40 |
ಲೂಕನು ೪:41 |
ಲೂಕನು ೪:42 |
ಲೂಕನು ೪:43 |
ಲೂಕನು ೪:44 |
|
|
|
|
|
|
ಲೂಕನು 1 / ಲೂಕ 1 |
ಲೂಕನು 2 / ಲೂಕ 2 |
ಲೂಕನು 3 / ಲೂಕ 3 |
ಲೂಕನು 4 / ಲೂಕ 4 |
ಲೂಕನು 5 / ಲೂಕ 5 |
ಲೂಕನು 6 / ಲೂಕ 6 |
ಲೂಕನು 7 / ಲೂಕ 7 |
ಲೂಕನು 8 / ಲೂಕ 8 |
ಲೂಕನು 9 / ಲೂಕ 9 |
ಲೂಕನು 10 / ಲೂಕ 10 |
ಲೂಕನು 11 / ಲೂಕ 11 |
ಲೂಕನು 12 / ಲೂಕ 12 |
ಲೂಕನು 13 / ಲೂಕ 13 |
ಲೂಕನು 14 / ಲೂಕ 14 |
ಲೂಕನು 15 / ಲೂಕ 15 |
ಲೂಕನು 16 / ಲೂಕ 16 |
ಲೂಕನು 17 / ಲೂಕ 17 |
ಲೂಕನು 18 / ಲೂಕ 18 |
ಲೂಕನು 19 / ಲೂಕ 19 |
ಲೂಕನು 20 / ಲೂಕ 20 |
ಲೂಕನು 21 / ಲೂಕ 21 |
ಲೂಕನು 22 / ಲೂಕ 22 |
ಲೂಕನು 23 / ಲೂಕ 23 |
ಲೂಕನು 24 / ಲೂಕ 24 |