೧ |
“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ. |
೨ |
ಬಾಗಿಲ ಮೂಲಕ ಬರುವವನು ಕುರಿಗಾಹಿ. |
೩ |
ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. |
೪ |
ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. |
೫ |
ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ. |
೬ |
ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ. |
೭ |
ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. |
೮ |
ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. |
೯ |
ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. |
೧೦ |
ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು. |
೧೧ |
“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ. |
೧೨ |
ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ. |
೧೩ |
ಅವನು ಕೇವಲ ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ. |
೧೪ |
ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ. |
೧೫ |
*** |
೧೬ |
ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು. |
೧೭ |
“ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ. |
೧೮ |
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು. |
೧೯ |
ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲಿ ಮತ್ತೆ ವಾದವೆದ್ದಿತು. |
೨೦ |
ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು. |
೨೧ |
ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು. |
೨೨ |
ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. |
೨೩ |
ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. |
೨೪ |
ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. |
೨೫ |
ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. |
೨೬ |
ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. |
೨೭ |
ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. |
೨೮ |
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು, |
೨೯ |
ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. |
೩೦ |
ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು. |
೩೧ |
ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು. |
೩೨ |
ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು. |
೩೩ |
ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು. |
೩೪ |
ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ? |
೩೫ |
ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ. |
೩೬ |
ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ? |
೩೭ |
ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ. |
೩೮ |
ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು. |
೩೯ |
ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು. |
೪೦ |
ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು. |
೪೧ |
ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು. |
೪೨ |
ಅಲ್ಲಿ ಹಲವರಿಗೆ ಯೇಸುವಿನಲ್ಲಿ ವಿಶ್ವಾಸ ಹುಟ್ಟಿತು. |
Kannada Bible (KNCL) 2016 |
No Data |
ಯೊವಾನ್ನನು ೧೦:1 |
ಯೊವಾನ್ನನು ೧೦:2 |
ಯೊವಾನ್ನನು ೧೦:3 |
ಯೊವಾನ್ನನು ೧೦:4 |
ಯೊವಾನ್ನನು ೧೦:5 |
ಯೊವಾನ್ನನು ೧೦:6 |
ಯೊವಾನ್ನನು ೧೦:7 |
ಯೊವಾನ್ನನು ೧೦:8 |
ಯೊವಾನ್ನನು ೧೦:9 |
ಯೊವಾನ್ನನು ೧೦:10 |
ಯೊವಾನ್ನನು ೧೦:11 |
ಯೊವಾನ್ನನು ೧೦:12 |
ಯೊವಾನ್ನನು ೧೦:13 |
ಯೊವಾನ್ನನು ೧೦:14 |
ಯೊವಾನ್ನನು ೧೦:15 |
ಯೊವಾನ್ನನು ೧೦:16 |
ಯೊವಾನ್ನನು ೧೦:17 |
ಯೊವಾನ್ನನು ೧೦:18 |
ಯೊವಾನ್ನನು ೧೦:19 |
ಯೊವಾನ್ನನು ೧೦:20 |
ಯೊವಾನ್ನನು ೧೦:21 |
ಯೊವಾನ್ನನು ೧೦:22 |
ಯೊವಾನ್ನನು ೧೦:23 |
ಯೊವಾನ್ನನು ೧೦:24 |
ಯೊವಾನ್ನನು ೧೦:25 |
ಯೊವಾನ್ನನು ೧೦:26 |
ಯೊವಾನ್ನನು ೧೦:27 |
ಯೊವಾನ್ನನು ೧೦:28 |
ಯೊವಾನ್ನನು ೧೦:29 |
ಯೊವಾನ್ನನು ೧೦:30 |
ಯೊವಾನ್ನನು ೧೦:31 |
ಯೊವಾನ್ನನು ೧೦:32 |
ಯೊವಾನ್ನನು ೧೦:33 |
ಯೊವಾನ್ನನು ೧೦:34 |
ಯೊವಾನ್ನನು ೧೦:35 |
ಯೊವಾನ್ನನು ೧೦:36 |
ಯೊವಾನ್ನನು ೧೦:37 |
ಯೊವಾನ್ನನು ೧೦:38 |
ಯೊವಾನ್ನನು ೧೦:39 |
ಯೊವಾನ್ನನು ೧೦:40 |
ಯೊವಾನ್ನನು ೧೦:41 |
ಯೊವಾನ್ನನು ೧೦:42 |
ಯೊವಾನ್ನನು 1 / ಯೊ 1 |
ಯೊವಾನ್ನನು 2 / ಯೊ 2 |
ಯೊವಾನ್ನನು 3 / ಯೊ 3 |
ಯೊವಾನ್ನನು 4 / ಯೊ 4 |
ಯೊವಾನ್ನನು 5 / ಯೊ 5 |
ಯೊವಾನ್ನನು 6 / ಯೊ 6 |
ಯೊವಾನ್ನನು 7 / ಯೊ 7 |
ಯೊವಾನ್ನನು 8 / ಯೊ 8 |
ಯೊವಾನ್ನನು 9 / ಯೊ 9 |
ಯೊವಾನ್ನನು 10 / ಯೊ 10 |
ಯೊವಾನ್ನನು 11 / ಯೊ 11 |
ಯೊವಾನ್ನನು 12 / ಯೊ 12 |
ಯೊವಾನ್ನನು 13 / ಯೊ 13 |
ಯೊವಾನ್ನನು 14 / ಯೊ 14 |
ಯೊವಾನ್ನನು 15 / ಯೊ 15 |
ಯೊವಾನ್ನನು 16 / ಯೊ 16 |
ಯೊವಾನ್ನನು 17 / ಯೊ 17 |
ಯೊವಾನ್ನನು 18 / ಯೊ 18 |
ಯೊವಾನ್ನನು 19 / ಯೊ 19 |
ಯೊವಾನ್ನನು 20 / ಯೊ 20 |
ಯೊವಾನ್ನನು 21 / ಯೊ 21 |
|
|
|
|
|