೧ |
ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. |
೨ |
ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. |
೩ |
ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. |
೪ |
ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು. |
೫ |
ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. |
೬ |
ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. |
೭ |
ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. |
೮ |
ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. |
೯ |
ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? |
೧೦ |
ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. |
೧೧ |
‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. |
೧೨ |
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. |
೧೩ |
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. |
೧೪ |
ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು. |
೧೫ |
ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ. |
೧೬ |
ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು. |
೧೭ |
ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು. |
೧೮ |
ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ. |
೧೯ |
ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ. |
೨೦ |
ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ. |
೨೧ |
ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” |
೨೨ |
ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. |
೨೩ |
ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. |
೨೪ |
ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. |
೨೫ |
ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. |
೨೬ |
ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು. |
೨೭ |
ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ. |
೨೮ |
ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. |
೨೯ |
ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ. |
೩೦ |
ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. |
೩೧ |
ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೊವಾನ್ನನು ೧೪:1 |
ಯೊವಾನ್ನನು ೧೪:2 |
ಯೊವಾನ್ನನು ೧೪:3 |
ಯೊವಾನ್ನನು ೧೪:4 |
ಯೊವಾನ್ನನು ೧೪:5 |
ಯೊವಾನ್ನನು ೧೪:6 |
ಯೊವಾನ್ನನು ೧೪:7 |
ಯೊವಾನ್ನನು ೧೪:8 |
ಯೊವಾನ್ನನು ೧೪:9 |
ಯೊವಾನ್ನನು ೧೪:10 |
ಯೊವಾನ್ನನು ೧೪:11 |
ಯೊವಾನ್ನನು ೧೪:12 |
ಯೊವಾನ್ನನು ೧೪:13 |
ಯೊವಾನ್ನನು ೧೪:14 |
ಯೊವಾನ್ನನು ೧೪:15 |
ಯೊವಾನ್ನನು ೧೪:16 |
ಯೊವಾನ್ನನು ೧೪:17 |
ಯೊವಾನ್ನನು ೧೪:18 |
ಯೊವಾನ್ನನು ೧೪:19 |
ಯೊವಾನ್ನನು ೧೪:20 |
ಯೊವಾನ್ನನು ೧೪:21 |
ಯೊವಾನ್ನನು ೧೪:22 |
ಯೊವಾನ್ನನು ೧೪:23 |
ಯೊವಾನ್ನನು ೧೪:24 |
ಯೊವಾನ್ನನು ೧೪:25 |
ಯೊವಾನ್ನನು ೧೪:26 |
ಯೊವಾನ್ನನು ೧೪:27 |
ಯೊವಾನ್ನನು ೧೪:28 |
ಯೊವಾನ್ನನು ೧೪:29 |
ಯೊವಾನ್ನನು ೧೪:30 |
ಯೊವಾನ್ನನು ೧೪:31 |
|
|
|
|
|
|
ಯೊವಾನ್ನನು 1 / ಯೊ 1 |
ಯೊವಾನ್ನನು 2 / ಯೊ 2 |
ಯೊವಾನ್ನನು 3 / ಯೊ 3 |
ಯೊವಾನ್ನನು 4 / ಯೊ 4 |
ಯೊವಾನ್ನನು 5 / ಯೊ 5 |
ಯೊವಾನ್ನನು 6 / ಯೊ 6 |
ಯೊವಾನ್ನನು 7 / ಯೊ 7 |
ಯೊವಾನ್ನನು 8 / ಯೊ 8 |
ಯೊವಾನ್ನನು 9 / ಯೊ 9 |
ಯೊವಾನ್ನನು 10 / ಯೊ 10 |
ಯೊವಾನ್ನನು 11 / ಯೊ 11 |
ಯೊವಾನ್ನನು 12 / ಯೊ 12 |
ಯೊವಾನ್ನನು 13 / ಯೊ 13 |
ಯೊವಾನ್ನನು 14 / ಯೊ 14 |
ಯೊವಾನ್ನನು 15 / ಯೊ 15 |
ಯೊವಾನ್ನನು 16 / ಯೊ 16 |
ಯೊವಾನ್ನನು 17 / ಯೊ 17 |
ಯೊವಾನ್ನನು 18 / ಯೊ 18 |
ಯೊವಾನ್ನನು 19 / ಯೊ 19 |
ಯೊವಾನ್ನನು 20 / ಯೊ 20 |
ಯೊವಾನ್ನನು 21 / ಯೊ 21 |