೧ |
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. |
೨ |
ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು. |
೩ |
ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. |
೪ |
ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. |
೫ |
ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. |
೬ |
ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. |
೭ |
ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. |
೮ |
ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು. |
೯ |
ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ. |
೧೦ |
ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು. |
೧೧ |
ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. |
೧೨ |
*** |
೧೩ |
ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು. |
೧೪ |
ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. |
೧೫ |
ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು. |
೧೬ |
ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ). |
೧೭ |
ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು. |
೧೮ |
ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು. |
೧೯ |
ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. |
೨೦ |
“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. |
೨೧ |
ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. |
೨೨ |
ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. |
೨೩ |
ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು. |
೨೪ |
ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. |
೨೫ |
ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು. |
೨೬ |
ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. |
೨೭ |
ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. |
೨೮ |
ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. |
೨೯ |
ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು. |
೩೦ |
ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. |
೩೧ |
ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೊವಾನ್ನನು ೨೦:1 |
ಯೊವಾನ್ನನು ೨೦:2 |
ಯೊವಾನ್ನನು ೨೦:3 |
ಯೊವಾನ್ನನು ೨೦:4 |
ಯೊವಾನ್ನನು ೨೦:5 |
ಯೊವಾನ್ನನು ೨೦:6 |
ಯೊವಾನ್ನನು ೨೦:7 |
ಯೊವಾನ್ನನು ೨೦:8 |
ಯೊವಾನ್ನನು ೨೦:9 |
ಯೊವಾನ್ನನು ೨೦:10 |
ಯೊವಾನ್ನನು ೨೦:11 |
ಯೊವಾನ್ನನು ೨೦:12 |
ಯೊವಾನ್ನನು ೨೦:13 |
ಯೊವಾನ್ನನು ೨೦:14 |
ಯೊವಾನ್ನನು ೨೦:15 |
ಯೊವಾನ್ನನು ೨೦:16 |
ಯೊವಾನ್ನನು ೨೦:17 |
ಯೊವಾನ್ನನು ೨೦:18 |
ಯೊವಾನ್ನನು ೨೦:19 |
ಯೊವಾನ್ನನು ೨೦:20 |
ಯೊವಾನ್ನನು ೨೦:21 |
ಯೊವಾನ್ನನು ೨೦:22 |
ಯೊವಾನ್ನನು ೨೦:23 |
ಯೊವಾನ್ನನು ೨೦:24 |
ಯೊವಾನ್ನನು ೨೦:25 |
ಯೊವಾನ್ನನು ೨೦:26 |
ಯೊವಾನ್ನನು ೨೦:27 |
ಯೊವಾನ್ನನು ೨೦:28 |
ಯೊವಾನ್ನನು ೨೦:29 |
ಯೊವಾನ್ನನು ೨೦:30 |
ಯೊವಾನ್ನನು ೨೦:31 |
|
|
|
|
|
|
ಯೊವಾನ್ನನು 1 / ಯೊ 1 |
ಯೊವಾನ್ನನು 2 / ಯೊ 2 |
ಯೊವಾನ್ನನು 3 / ಯೊ 3 |
ಯೊವಾನ್ನನು 4 / ಯೊ 4 |
ಯೊವಾನ್ನನು 5 / ಯೊ 5 |
ಯೊವಾನ್ನನು 6 / ಯೊ 6 |
ಯೊವಾನ್ನನು 7 / ಯೊ 7 |
ಯೊವಾನ್ನನು 8 / ಯೊ 8 |
ಯೊವಾನ್ನನು 9 / ಯೊ 9 |
ಯೊವಾನ್ನನು 10 / ಯೊ 10 |
ಯೊವಾನ್ನನು 11 / ಯೊ 11 |
ಯೊವಾನ್ನನು 12 / ಯೊ 12 |
ಯೊವಾನ್ನನು 13 / ಯೊ 13 |
ಯೊವಾನ್ನನು 14 / ಯೊ 14 |
ಯೊವಾನ್ನನು 15 / ಯೊ 15 |
ಯೊವಾನ್ನನು 16 / ಯೊ 16 |
ಯೊವಾನ್ನನು 17 / ಯೊ 17 |
ಯೊವಾನ್ನನು 18 / ಯೊ 18 |
ಯೊವಾನ್ನನು 19 / ಯೊ 19 |
ಯೊವಾನ್ನನು 20 / ಯೊ 20 |
ಯೊವಾನ್ನನು 21 / ಯೊ 21 |