A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಪ್ರೇಷಿತರ ೨೫ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.
ಅಲ್ಲಿ ಮುಖ್ಯಯಾಜಕರು ಮತ್ತು ಯೆಹೂದ್ಯರ ಮುಖಂಡರು ಪೌಲನ ವಿರುದ್ಧ ಅವನಿಗೆ ದೂರಿತ್ತರು.
ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.
ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.
ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.
ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.
ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.
ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.
ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.
೧೦
ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
೧೧
ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.
೧೨
ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.
೧೩
ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.
೧೪
ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.
೧೫
ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು.
೧೬
ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.
೧೭
ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.
೧೮
ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ.
೧೯
ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.
೨೦
ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ.
೨೧
ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು.
೨೨
ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ.
೨೩
ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.
೨೪
ಆಗ ಫೆಸ್ತನು, “ಅಗ್ರಿಪ್ಪರಾಜರೇ, ಇಲ್ಲಿ ನೆರೆದಿರುವ ಮಹಾಜನರೇ, ನೀವು ನೋಡುತ್ತಿರುವ ಈ ವ್ಯಕ್ತಿಯ ವಿರುದ್ಧ ಇಲ್ಲಿಯೂ ಜೆರುಸಲೇಮಿನಲ್ಲಿಯೂ ಯೆಹೂದ್ಯರೆಲ್ಲರೂ ನನ್ನಲ್ಲಿ ಮನವಿಮಾಡಿಕೊಂಡಿದ್ದಾರೆ. ಇವನನ್ನು ಜೀವಸಹಿತ ಬಿಡಬಾರದೆಂದು ಕೂಗಾಡುತ್ತಿದ್ದಾರೆ.
೨೫
ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.
೨೬
ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.
೨೭
ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.ಪ್ರೇಷಿತರ ೨೫:1
ಪ್ರೇಷಿತರ ೨೫:2
ಪ್ರೇಷಿತರ ೨೫:3
ಪ್ರೇಷಿತರ ೨೫:4
ಪ್ರೇಷಿತರ ೨೫:5
ಪ್ರೇಷಿತರ ೨೫:6
ಪ್ರೇಷಿತರ ೨೫:7
ಪ್ರೇಷಿತರ ೨೫:8
ಪ್ರೇಷಿತರ ೨೫:9
ಪ್ರೇಷಿತರ ೨೫:10
ಪ್ರೇಷಿತರ ೨೫:11
ಪ್ರೇಷಿತರ ೨೫:12
ಪ್ರೇಷಿತರ ೨೫:13
ಪ್ರೇಷಿತರ ೨೫:14
ಪ್ರೇಷಿತರ ೨೫:15
ಪ್ರೇಷಿತರ ೨೫:16
ಪ್ರೇಷಿತರ ೨೫:17
ಪ್ರೇಷಿತರ ೨೫:18
ಪ್ರೇಷಿತರ ೨೫:19
ಪ್ರೇಷಿತರ ೨೫:20
ಪ್ರೇಷಿತರ ೨೫:21
ಪ್ರೇಷಿತರ ೨೫:22
ಪ್ರೇಷಿತರ ೨೫:23
ಪ್ರೇಷಿತರ ೨೫:24
ಪ್ರೇಷಿತರ ೨೫:25
ಪ್ರೇಷಿತರ ೨೫:26
ಪ್ರೇಷಿತರ ೨೫:27


ಪ್ರೇಷಿತರ 1 / ಪ್ರೇಷಿ 1
ಪ್ರೇಷಿತರ 2 / ಪ್ರೇಷಿ 2
ಪ್ರೇಷಿತರ 3 / ಪ್ರೇಷಿ 3
ಪ್ರೇಷಿತರ 4 / ಪ್ರೇಷಿ 4
ಪ್ರೇಷಿತರ 5 / ಪ್ರೇಷಿ 5
ಪ್ರೇಷಿತರ 6 / ಪ್ರೇಷಿ 6
ಪ್ರೇಷಿತರ 7 / ಪ್ರೇಷಿ 7
ಪ್ರೇಷಿತರ 8 / ಪ್ರೇಷಿ 8
ಪ್ರೇಷಿತರ 9 / ಪ್ರೇಷಿ 9
ಪ್ರೇಷಿತರ 10 / ಪ್ರೇಷಿ 10
ಪ್ರೇಷಿತರ 11 / ಪ್ರೇಷಿ 11
ಪ್ರೇಷಿತರ 12 / ಪ್ರೇಷಿ 12
ಪ್ರೇಷಿತರ 13 / ಪ್ರೇಷಿ 13
ಪ್ರೇಷಿತರ 14 / ಪ್ರೇಷಿ 14
ಪ್ರೇಷಿತರ 15 / ಪ್ರೇಷಿ 15
ಪ್ರೇಷಿತರ 16 / ಪ್ರೇಷಿ 16
ಪ್ರೇಷಿತರ 17 / ಪ್ರೇಷಿ 17
ಪ್ರೇಷಿತರ 18 / ಪ್ರೇಷಿ 18
ಪ್ರೇಷಿತರ 19 / ಪ್ರೇಷಿ 19
ಪ್ರೇಷಿತರ 20 / ಪ್ರೇಷಿ 20
ಪ್ರೇಷಿತರ 21 / ಪ್ರೇಷಿ 21
ಪ್ರೇಷಿತರ 22 / ಪ್ರೇಷಿ 22
ಪ್ರೇಷಿತರ 23 / ಪ್ರೇಷಿ 23
ಪ್ರೇಷಿತರ 24 / ಪ್ರೇಷಿ 24
ಪ್ರೇಷಿತರ 25 / ಪ್ರೇಷಿ 25
ಪ್ರೇಷಿತರ 26 / ಪ್ರೇಷಿ 26
ಪ್ರೇಷಿತರ 27 / ಪ್ರೇಷಿ 27
ಪ್ರೇಷಿತರ 28 / ಪ್ರೇಷಿ 28