A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಪ್ರೇಷಿತರ ೮ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.
ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.
ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.
ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.
ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.
ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು.
ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.
ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.
ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.
೧೦
ಆ ಪಟ್ಟಣದವರೆಲ್ಲರೂ ಹಿರಿಯರು ಕಿರಿಯರು ಎನ್ನದೆ, ಅವನ ಮಾತಿಗೆ ಕಾತರದಿಂದ ಕಿವಿಗೊಡುತ್ತಿದ್ದರು. ‘ದೇವರ ಮಹಾಶಕ್ತಿ’ ಇವನೇ ಎಂದುಕೊಳ್ಳುತ್ತಿದ್ದರು.
೧೧
ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.
೧೨
ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.
೧೩
ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.
೧೪
ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.
೧೫
ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
೧೬
ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ.
೧೭
ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.
೧೮
ಪ್ರೇಷಿತರು ಹಸ್ತನಿಕ್ಷೇಪ ಮಾಡಿದಾಗ ಭಕ್ತರಿಗೆ ಪವಿತ್ರಾತ್ಮ ಪ್ರಧಾನವಾಗುವುದನ್ನು ಸಿಮೋನನು ಕಂಡನು. ಪೇತ್ರ ಮತ್ತು ಯೊವಾನ್ನರಿಗೆ ಹಣವನ್ನು ನೀಡುತ್ತಾ,
೧೯
“ನಾನೂ ಸಹ ಯಾರ ಮೇಲೆ ಕೈಯಿಟ್ಟರೂ ಅವರು ಪವಿತ್ರಾತ್ಮ ಅವರ ವರವನ್ನು ಹೊಂದುವಂತಹ ಶಕ್ತಿಯನ್ನು ನನಗೂ ಕೊಡಿ,” ಎಂದು ಕೇಳಿಕೊಂಡನು.
೨೦
ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?
೨೧
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.
೨೨
ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.
೨೩
ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.
೨೪
ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.
೨೫
ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.
೨೬
ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.
೨೭
ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.
೨೮
***
೨೯
ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.
೩೦
ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.
೩೧
ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.
೩೨
ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.
೩೩
ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”
೩೪
ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು.
೩೫
ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.
೩೬
ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.
೩೭
(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).
೩೮
ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು.
೩೯
ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.
೪೦
ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.ಪ್ರೇಷಿತರ ೮:1
ಪ್ರೇಷಿತರ ೮:2
ಪ್ರೇಷಿತರ ೮:3
ಪ್ರೇಷಿತರ ೮:4
ಪ್ರೇಷಿತರ ೮:5
ಪ್ರೇಷಿತರ ೮:6
ಪ್ರೇಷಿತರ ೮:7
ಪ್ರೇಷಿತರ ೮:8
ಪ್ರೇಷಿತರ ೮:9
ಪ್ರೇಷಿತರ ೮:10
ಪ್ರೇಷಿತರ ೮:11
ಪ್ರೇಷಿತರ ೮:12
ಪ್ರೇಷಿತರ ೮:13
ಪ್ರೇಷಿತರ ೮:14
ಪ್ರೇಷಿತರ ೮:15
ಪ್ರೇಷಿತರ ೮:16
ಪ್ರೇಷಿತರ ೮:17
ಪ್ರೇಷಿತರ ೮:18
ಪ್ರೇಷಿತರ ೮:19
ಪ್ರೇಷಿತರ ೮:20
ಪ್ರೇಷಿತರ ೮:21
ಪ್ರೇಷಿತರ ೮:22
ಪ್ರೇಷಿತರ ೮:23
ಪ್ರೇಷಿತರ ೮:24
ಪ್ರೇಷಿತರ ೮:25
ಪ್ರೇಷಿತರ ೮:26
ಪ್ರೇಷಿತರ ೮:27
ಪ್ರೇಷಿತರ ೮:28
ಪ್ರೇಷಿತರ ೮:29
ಪ್ರೇಷಿತರ ೮:30
ಪ್ರೇಷಿತರ ೮:31
ಪ್ರೇಷಿತರ ೮:32
ಪ್ರೇಷಿತರ ೮:33
ಪ್ರೇಷಿತರ ೮:34
ಪ್ರೇಷಿತರ ೮:35
ಪ್ರೇಷಿತರ ೮:36
ಪ್ರೇಷಿತರ ೮:37
ಪ್ರೇಷಿತರ ೮:38
ಪ್ರೇಷಿತರ ೮:39
ಪ್ರೇಷಿತರ ೮:40


ಪ್ರೇಷಿತರ 1 / ಪ್ರೇಷಿ 1
ಪ್ರೇಷಿತರ 2 / ಪ್ರೇಷಿ 2
ಪ್ರೇಷಿತರ 3 / ಪ್ರೇಷಿ 3
ಪ್ರೇಷಿತರ 4 / ಪ್ರೇಷಿ 4
ಪ್ರೇಷಿತರ 5 / ಪ್ರೇಷಿ 5
ಪ್ರೇಷಿತರ 6 / ಪ್ರೇಷಿ 6
ಪ್ರೇಷಿತರ 7 / ಪ್ರೇಷಿ 7
ಪ್ರೇಷಿತರ 8 / ಪ್ರೇಷಿ 8
ಪ್ರೇಷಿತರ 9 / ಪ್ರೇಷಿ 9
ಪ್ರೇಷಿತರ 10 / ಪ್ರೇಷಿ 10
ಪ್ರೇಷಿತರ 11 / ಪ್ರೇಷಿ 11
ಪ್ರೇಷಿತರ 12 / ಪ್ರೇಷಿ 12
ಪ್ರೇಷಿತರ 13 / ಪ್ರೇಷಿ 13
ಪ್ರೇಷಿತರ 14 / ಪ್ರೇಷಿ 14
ಪ್ರೇಷಿತರ 15 / ಪ್ರೇಷಿ 15
ಪ್ರೇಷಿತರ 16 / ಪ್ರೇಷಿ 16
ಪ್ರೇಷಿತರ 17 / ಪ್ರೇಷಿ 17
ಪ್ರೇಷಿತರ 18 / ಪ್ರೇಷಿ 18
ಪ್ರೇಷಿತರ 19 / ಪ್ರೇಷಿ 19
ಪ್ರೇಷಿತರ 20 / ಪ್ರೇಷಿ 20
ಪ್ರೇಷಿತರ 21 / ಪ್ರೇಷಿ 21
ಪ್ರೇಷಿತರ 22 / ಪ್ರೇಷಿ 22
ಪ್ರೇಷಿತರ 23 / ಪ್ರೇಷಿ 23
ಪ್ರೇಷಿತರ 24 / ಪ್ರೇಷಿ 24
ಪ್ರೇಷಿತರ 25 / ಪ್ರೇಷಿ 25
ಪ್ರೇಷಿತರ 26 / ಪ್ರೇಷಿ 26
ಪ್ರೇಷಿತರ 27 / ಪ್ರೇಷಿ 27
ಪ್ರೇಷಿತರ 28 / ಪ್ರೇಷಿ 28