೧ |
ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು. |
೨ |
ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು. |
೩ |
ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು. |
೪ |
ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು. |
೫ |
ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು. |
೬ |
ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು. |
೭ |
ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು. |
೮ |
ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. |
೯ |
ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ. |
೧೦ |
ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು. |
೧೧ |
ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ. |
೧೨ |
ಅಲ್ಲದೆ ಅನನೀಯ ಎಂಬವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ,” ಎಂದರು. |
೧೩ |
ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ. |
೧೪ |
ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು. |
೧೫ |
ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು. |
೧೬ |
ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು. |
೧೭ |
ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು. |
೧೮ |
ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು. |
೧೯ |
ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು. |
೨೦ |
ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು. |
೨೧ |
ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು. |
೨೨ |
ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು. |
೨೩ |
ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು. |
೨೪ |
ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು. |
೨೫ |
ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು. |
೨೬ |
ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು. |
೨೭ |
ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು. |
೨೮ |
ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು. |
೨೯ |
ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು. |
೩೦ |
ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು. |
೩೧ |
ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು. |
೩೨ |
ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು. |
೩೩ |
ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು. |
೩೪ |
ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು. |
೩೫ |
ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು. |
೩೬ |
ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’ ) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು. |
೩೭ |
ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು. |
೩೮ |
ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು. |
೩೯ |
ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು. |
೪೦ |
ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು. |
೪೧ |
ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು. |
೪೨ |
ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು. |
೪೩ |
ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.
|
Kannada Bible (KNCL) 2016 |
No Data |
|
|
|
|
|
|
|
|
|
|
ಪ್ರೇಷಿತರ ೯:1 |
ಪ್ರೇಷಿತರ ೯:2 |
ಪ್ರೇಷಿತರ ೯:3 |
ಪ್ರೇಷಿತರ ೯:4 |
ಪ್ರೇಷಿತರ ೯:5 |
ಪ್ರೇಷಿತರ ೯:6 |
ಪ್ರೇಷಿತರ ೯:7 |
ಪ್ರೇಷಿತರ ೯:8 |
ಪ್ರೇಷಿತರ ೯:9 |
ಪ್ರೇಷಿತರ ೯:10 |
ಪ್ರೇಷಿತರ ೯:11 |
ಪ್ರೇಷಿತರ ೯:12 |
ಪ್ರೇಷಿತರ ೯:13 |
ಪ್ರೇಷಿತರ ೯:14 |
ಪ್ರೇಷಿತರ ೯:15 |
ಪ್ರೇಷಿತರ ೯:16 |
ಪ್ರೇಷಿತರ ೯:17 |
ಪ್ರೇಷಿತರ ೯:18 |
ಪ್ರೇಷಿತರ ೯:19 |
ಪ್ರೇಷಿತರ ೯:20 |
ಪ್ರೇಷಿತರ ೯:21 |
ಪ್ರೇಷಿತರ ೯:22 |
ಪ್ರೇಷಿತರ ೯:23 |
ಪ್ರೇಷಿತರ ೯:24 |
ಪ್ರೇಷಿತರ ೯:25 |
ಪ್ರೇಷಿತರ ೯:26 |
ಪ್ರೇಷಿತರ ೯:27 |
ಪ್ರೇಷಿತರ ೯:28 |
ಪ್ರೇಷಿತರ ೯:29 |
ಪ್ರೇಷಿತರ ೯:30 |
ಪ್ರೇಷಿತರ ೯:31 |
ಪ್ರೇಷಿತರ ೯:32 |
ಪ್ರೇಷಿತರ ೯:33 |
ಪ್ರೇಷಿತರ ೯:34 |
ಪ್ರೇಷಿತರ ೯:35 |
ಪ್ರೇಷಿತರ ೯:36 |
ಪ್ರೇಷಿತರ ೯:37 |
ಪ್ರೇಷಿತರ ೯:38 |
ಪ್ರೇಷಿತರ ೯:39 |
ಪ್ರೇಷಿತರ ೯:40 |
ಪ್ರೇಷಿತರ ೯:41 |
ಪ್ರೇಷಿತರ ೯:42 |
ಪ್ರೇಷಿತರ ೯:43 |
|
|
|
|
|
|
ಪ್ರೇಷಿತರ 1 / ಪ್ರೇಷಿ 1 |
ಪ್ರೇಷಿತರ 2 / ಪ್ರೇಷಿ 2 |
ಪ್ರೇಷಿತರ 3 / ಪ್ರೇಷಿ 3 |
ಪ್ರೇಷಿತರ 4 / ಪ್ರೇಷಿ 4 |
ಪ್ರೇಷಿತರ 5 / ಪ್ರೇಷಿ 5 |
ಪ್ರೇಷಿತರ 6 / ಪ್ರೇಷಿ 6 |
ಪ್ರೇಷಿತರ 7 / ಪ್ರೇಷಿ 7 |
ಪ್ರೇಷಿತರ 8 / ಪ್ರೇಷಿ 8 |
ಪ್ರೇಷಿತರ 9 / ಪ್ರೇಷಿ 9 |
ಪ್ರೇಷಿತರ 10 / ಪ್ರೇಷಿ 10 |
ಪ್ರೇಷಿತರ 11 / ಪ್ರೇಷಿ 11 |
ಪ್ರೇಷಿತರ 12 / ಪ್ರೇಷಿ 12 |
ಪ್ರೇಷಿತರ 13 / ಪ್ರೇಷಿ 13 |
ಪ್ರೇಷಿತರ 14 / ಪ್ರೇಷಿ 14 |
ಪ್ರೇಷಿತರ 15 / ಪ್ರೇಷಿ 15 |
ಪ್ರೇಷಿತರ 16 / ಪ್ರೇಷಿ 16 |
ಪ್ರೇಷಿತರ 17 / ಪ್ರೇಷಿ 17 |
ಪ್ರೇಷಿತರ 18 / ಪ್ರೇಷಿ 18 |
ಪ್ರೇಷಿತರ 19 / ಪ್ರೇಷಿ 19 |
ಪ್ರೇಷಿತರ 20 / ಪ್ರೇಷಿ 20 |
ಪ್ರೇಷಿತರ 21 / ಪ್ರೇಷಿ 21 |
ಪ್ರೇಷಿತರ 22 / ಪ್ರೇಷಿ 22 |
ಪ್ರೇಷಿತರ 23 / ಪ್ರೇಷಿ 23 |
ಪ್ರೇಷಿತರ 24 / ಪ್ರೇಷಿ 24 |
ಪ್ರೇಷಿತರ 25 / ಪ್ರೇಷಿ 25 |
ಪ್ರೇಷಿತರ 26 / ಪ್ರೇಷಿ 26 |
ಪ್ರೇಷಿತರ 27 / ಪ್ರೇಷಿ 27 |
ಪ್ರೇಷಿತರ 28 / ಪ್ರೇಷಿ 28 |