A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ರೋಮನರಿಗೆ ೧೨ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.
ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.
ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟಕಾರ್ಯವನ್ನು ನಿರ್ವಹಿಸುತ್ತವೆ.
ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.
ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.
ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ
ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.
ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.
೧೦
ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
೧೧
ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.
೧೨
ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.
೧೩
ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.
೧೪
ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.
೧೫
ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.
೧೬
ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.
೧೭
ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.
೧೮
ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.
೧೯
ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
೨೦
ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.
೨೧
ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.ರೋಮನರಿಗೆ ೧೨:1
ರೋಮನರಿಗೆ ೧೨:2
ರೋಮನರಿಗೆ ೧೨:3
ರೋಮನರಿಗೆ ೧೨:4
ರೋಮನರಿಗೆ ೧೨:5
ರೋಮನರಿಗೆ ೧೨:6
ರೋಮನರಿಗೆ ೧೨:7
ರೋಮನರಿಗೆ ೧೨:8
ರೋಮನರಿಗೆ ೧೨:9
ರೋಮನರಿಗೆ ೧೨:10
ರೋಮನರಿಗೆ ೧೨:11
ರೋಮನರಿಗೆ ೧೨:12
ರೋಮನರಿಗೆ ೧೨:13
ರೋಮನರಿಗೆ ೧೨:14
ರೋಮನರಿಗೆ ೧೨:15
ರೋಮನರಿಗೆ ೧೨:16
ರೋಮನರಿಗೆ ೧೨:17
ರೋಮನರಿಗೆ ೧೨:18
ರೋಮನರಿಗೆ ೧೨:19
ರೋಮನರಿಗೆ ೧೨:20
ರೋಮನರಿಗೆ ೧೨:21


ರೋಮನರಿಗೆ 1 / ರೋ 1
ರೋಮನರಿಗೆ 2 / ರೋ 2
ರೋಮನರಿಗೆ 3 / ರೋ 3
ರೋಮನರಿಗೆ 4 / ರೋ 4
ರೋಮನರಿಗೆ 5 / ರೋ 5
ರೋಮನರಿಗೆ 6 / ರೋ 6
ರೋಮನರಿಗೆ 7 / ರೋ 7
ರೋಮನರಿಗೆ 8 / ರೋ 8
ರೋಮನರಿಗೆ 9 / ರೋ 9
ರೋಮನರಿಗೆ 10 / ರೋ 10
ರೋಮನರಿಗೆ 11 / ರೋ 11
ರೋಮನರಿಗೆ 12 / ರೋ 12
ರೋಮನರಿಗೆ 13 / ರೋ 13
ರೋಮನರಿಗೆ 14 / ರೋ 14
ರೋಮನರಿಗೆ 15 / ರೋ 15
ರೋಮನರಿಗೆ 16 / ರೋ 16