A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಕೊರಿಂಥಿಯರಿಗೆ ೧ ೨



ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.
ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.
ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.
ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.
ಅಂತೆಯೇ, ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.
ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.
ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.
ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.
ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”
೧೦
ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.
೧೧
ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.
೧೨
ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.
೧೩
ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.
೧೪
ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.
೧೫
ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.
೧೬
“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.











ಕೊರಿಂಥಿಯರಿಗೆ ೧ ೨:1
ಕೊರಿಂಥಿಯರಿಗೆ ೧ ೨:2
ಕೊರಿಂಥಿಯರಿಗೆ ೧ ೨:3
ಕೊರಿಂಥಿಯರಿಗೆ ೧ ೨:4
ಕೊರಿಂಥಿಯರಿಗೆ ೧ ೨:5
ಕೊರಿಂಥಿಯರಿಗೆ ೧ ೨:6
ಕೊರಿಂಥಿಯರಿಗೆ ೧ ೨:7
ಕೊರಿಂಥಿಯರಿಗೆ ೧ ೨:8
ಕೊರಿಂಥಿಯರಿಗೆ ೧ ೨:9
ಕೊರಿಂಥಿಯರಿಗೆ ೧ ೨:10
ಕೊರಿಂಥಿಯರಿಗೆ ೧ ೨:11
ಕೊರಿಂಥಿಯರಿಗೆ ೧ ೨:12
ಕೊರಿಂಥಿಯರಿಗೆ ೧ ೨:13
ಕೊರಿಂಥಿಯರಿಗೆ ೧ ೨:14
ಕೊರಿಂಥಿಯರಿಗೆ ೧ ೨:15
ಕೊರಿಂಥಿಯರಿಗೆ ೧ ೨:16






ಕೊರಿಂಥಿಯರಿಗೆ ೧ 1 / ಕೊ೧ 1
ಕೊರಿಂಥಿಯರಿಗೆ ೧ 2 / ಕೊ೧ 2
ಕೊರಿಂಥಿಯರಿಗೆ ೧ 3 / ಕೊ೧ 3
ಕೊರಿಂಥಿಯರಿಗೆ ೧ 4 / ಕೊ೧ 4
ಕೊರಿಂಥಿಯರಿಗೆ ೧ 5 / ಕೊ೧ 5
ಕೊರಿಂಥಿಯರಿಗೆ ೧ 6 / ಕೊ೧ 6
ಕೊರಿಂಥಿಯರಿಗೆ ೧ 7 / ಕೊ೧ 7
ಕೊರಿಂಥಿಯರಿಗೆ ೧ 8 / ಕೊ೧ 8
ಕೊರಿಂಥಿಯರಿಗೆ ೧ 9 / ಕೊ೧ 9
ಕೊರಿಂಥಿಯರಿಗೆ ೧ 10 / ಕೊ೧ 10
ಕೊರಿಂಥಿಯರಿಗೆ ೧ 11 / ಕೊ೧ 11
ಕೊರಿಂಥಿಯರಿಗೆ ೧ 12 / ಕೊ೧ 12
ಕೊರಿಂಥಿಯರಿಗೆ ೧ 13 / ಕೊ೧ 13
ಕೊರಿಂಥಿಯರಿಗೆ ೧ 14 / ಕೊ೧ 14
ಕೊರಿಂಥಿಯರಿಗೆ ೧ 15 / ಕೊ೧ 15
ಕೊರಿಂಥಿಯರಿಗೆ ೧ 16 / ಕೊ೧ 16