೧ |
ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು. |
೨ |
ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ. |
೩ |
ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ? |
೪ |
ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು? |
೫ |
ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ. |
೬ |
ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು. |
೭ |
ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು. |
೮ |
ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ. |
೯ |
ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ. |
೧೦ |
ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ. |
೧೧ |
ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು. |
೧೨ |
ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ. |
೧೩ |
ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು. |
೧೪ |
ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ. |
೧೫ |
ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ. |
೧೬ |
ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. |
೧೭ |
ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ. |
೧೮ |
ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. |
೧೯ |
ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ |
೨೦ |
“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ? |
೨೧ |
ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. |
೨೨ |
ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. |
೨೩ |
ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಕೊರಿಂಥಿಯರಿಗೆ ೧ ೩:1 |
ಕೊರಿಂಥಿಯರಿಗೆ ೧ ೩:2 |
ಕೊರಿಂಥಿಯರಿಗೆ ೧ ೩:3 |
ಕೊರಿಂಥಿಯರಿಗೆ ೧ ೩:4 |
ಕೊರಿಂಥಿಯರಿಗೆ ೧ ೩:5 |
ಕೊರಿಂಥಿಯರಿಗೆ ೧ ೩:6 |
ಕೊರಿಂಥಿಯರಿಗೆ ೧ ೩:7 |
ಕೊರಿಂಥಿಯರಿಗೆ ೧ ೩:8 |
ಕೊರಿಂಥಿಯರಿಗೆ ೧ ೩:9 |
ಕೊರಿಂಥಿಯರಿಗೆ ೧ ೩:10 |
ಕೊರಿಂಥಿಯರಿಗೆ ೧ ೩:11 |
ಕೊರಿಂಥಿಯರಿಗೆ ೧ ೩:12 |
ಕೊರಿಂಥಿಯರಿಗೆ ೧ ೩:13 |
ಕೊರಿಂಥಿಯರಿಗೆ ೧ ೩:14 |
ಕೊರಿಂಥಿಯರಿಗೆ ೧ ೩:15 |
ಕೊರಿಂಥಿಯರಿಗೆ ೧ ೩:16 |
ಕೊರಿಂಥಿಯರಿಗೆ ೧ ೩:17 |
ಕೊರಿಂಥಿಯರಿಗೆ ೧ ೩:18 |
ಕೊರಿಂಥಿಯರಿಗೆ ೧ ೩:19 |
ಕೊರಿಂಥಿಯರಿಗೆ ೧ ೩:20 |
ಕೊರಿಂಥಿಯರಿಗೆ ೧ ೩:21 |
ಕೊರಿಂಥಿಯರಿಗೆ ೧ ೩:22 |
ಕೊರಿಂಥಿಯರಿಗೆ ೧ ೩:23 |
|
|
|
|
|
|
ಕೊರಿಂಥಿಯರಿಗೆ ೧ 1 / ಕೊ೧ 1 |
ಕೊರಿಂಥಿಯರಿಗೆ ೧ 2 / ಕೊ೧ 2 |
ಕೊರಿಂಥಿಯರಿಗೆ ೧ 3 / ಕೊ೧ 3 |
ಕೊರಿಂಥಿಯರಿಗೆ ೧ 4 / ಕೊ೧ 4 |
ಕೊರಿಂಥಿಯರಿಗೆ ೧ 5 / ಕೊ೧ 5 |
ಕೊರಿಂಥಿಯರಿಗೆ ೧ 6 / ಕೊ೧ 6 |
ಕೊರಿಂಥಿಯರಿಗೆ ೧ 7 / ಕೊ೧ 7 |
ಕೊರಿಂಥಿಯರಿಗೆ ೧ 8 / ಕೊ೧ 8 |
ಕೊರಿಂಥಿಯರಿಗೆ ೧ 9 / ಕೊ೧ 9 |
ಕೊರಿಂಥಿಯರಿಗೆ ೧ 10 / ಕೊ೧ 10 |
ಕೊರಿಂಥಿಯರಿಗೆ ೧ 11 / ಕೊ೧ 11 |
ಕೊರಿಂಥಿಯರಿಗೆ ೧ 12 / ಕೊ೧ 12 |
ಕೊರಿಂಥಿಯರಿಗೆ ೧ 13 / ಕೊ೧ 13 |
ಕೊರಿಂಥಿಯರಿಗೆ ೧ 14 / ಕೊ೧ 14 |
ಕೊರಿಂಥಿಯರಿಗೆ ೧ 15 / ಕೊ೧ 15 |
ಕೊರಿಂಥಿಯರಿಗೆ ೧ 16 / ಕೊ೧ 16 |