A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಕೊರಿಂಥಿಯರಿಗೆ ೨ ೧೨ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:
ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.
ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.
ಅಲ್ಲಿ ಅವನಿಗೆ ಕೇಳಿಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು.
ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ.
ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.
ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.
ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.
೧೦
ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.
೧೧
ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.
೧೨
ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.
೧೩
ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.
೧೪
ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.
೧೫
ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?
೧೬
ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.
೧೭
ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ?
೧೮
ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?
೧೯
ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.
೨೦
ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.
೨೧
ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.ಕೊರಿಂಥಿಯರಿಗೆ ೨ ೧೨:1
ಕೊರಿಂಥಿಯರಿಗೆ ೨ ೧೨:2
ಕೊರಿಂಥಿಯರಿಗೆ ೨ ೧೨:3
ಕೊರಿಂಥಿಯರಿಗೆ ೨ ೧೨:4
ಕೊರಿಂಥಿಯರಿಗೆ ೨ ೧೨:5
ಕೊರಿಂಥಿಯರಿಗೆ ೨ ೧೨:6
ಕೊರಿಂಥಿಯರಿಗೆ ೨ ೧೨:7
ಕೊರಿಂಥಿಯರಿಗೆ ೨ ೧೨:8
ಕೊರಿಂಥಿಯರಿಗೆ ೨ ೧೨:9
ಕೊರಿಂಥಿಯರಿಗೆ ೨ ೧೨:10
ಕೊರಿಂಥಿಯರಿಗೆ ೨ ೧೨:11
ಕೊರಿಂಥಿಯರಿಗೆ ೨ ೧೨:12
ಕೊರಿಂಥಿಯರಿಗೆ ೨ ೧೨:13
ಕೊರಿಂಥಿಯರಿಗೆ ೨ ೧೨:14
ಕೊರಿಂಥಿಯರಿಗೆ ೨ ೧೨:15
ಕೊರಿಂಥಿಯರಿಗೆ ೨ ೧೨:16
ಕೊರಿಂಥಿಯರಿಗೆ ೨ ೧೨:17
ಕೊರಿಂಥಿಯರಿಗೆ ೨ ೧೨:18
ಕೊರಿಂಥಿಯರಿಗೆ ೨ ೧೨:19
ಕೊರಿಂಥಿಯರಿಗೆ ೨ ೧೨:20
ಕೊರಿಂಥಿಯರಿಗೆ ೨ ೧೨:21


ಕೊರಿಂಥಿಯರಿಗೆ ೨ 1 / ಕೊ೨ 1
ಕೊರಿಂಥಿಯರಿಗೆ ೨ 2 / ಕೊ೨ 2
ಕೊರಿಂಥಿಯರಿಗೆ ೨ 3 / ಕೊ೨ 3
ಕೊರಿಂಥಿಯರಿಗೆ ೨ 4 / ಕೊ೨ 4
ಕೊರಿಂಥಿಯರಿಗೆ ೨ 5 / ಕೊ೨ 5
ಕೊರಿಂಥಿಯರಿಗೆ ೨ 6 / ಕೊ೨ 6
ಕೊರಿಂಥಿಯರಿಗೆ ೨ 7 / ಕೊ೨ 7
ಕೊರಿಂಥಿಯರಿಗೆ ೨ 8 / ಕೊ೨ 8
ಕೊರಿಂಥಿಯರಿಗೆ ೨ 9 / ಕೊ೨ 9
ಕೊರಿಂಥಿಯರಿಗೆ ೨ 10 / ಕೊ೨ 10
ಕೊರಿಂಥಿಯರಿಗೆ ೨ 11 / ಕೊ೨ 11
ಕೊರಿಂಥಿಯರಿಗೆ ೨ 12 / ಕೊ೨ 12
ಕೊರಿಂಥಿಯರಿಗೆ ೨ 13 / ಕೊ೨ 13