೧ |
ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ? |
೨ |
ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು. |
೩ |
ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ. |
೪ |
ಕ್ರಿಸ್ತಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ. |
೫ |
ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು. |
೬ |
ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು. |
೭ |
ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ. |
೮ |
ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? |
೯ |
ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? |
೧೦ |
ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ. |
೧೧ |
ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು? |
೧೨ |
ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ. |
೧೩ |
ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ. |
೧೪ |
ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ. |
೧೫ |
ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ. |
೧೬ |
‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’ |
೧೭ |
ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ. |
೧೮ |
ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.
|
Kannada Bible (KNCL) 2016 |
No Data |
|
|
|
|
|
|
|
|
|
|
ಕೊರಿಂಥಿಯರಿಗೆ ೨ ೩:1 |
ಕೊರಿಂಥಿಯರಿಗೆ ೨ ೩:2 |
ಕೊರಿಂಥಿಯರಿಗೆ ೨ ೩:3 |
ಕೊರಿಂಥಿಯರಿಗೆ ೨ ೩:4 |
ಕೊರಿಂಥಿಯರಿಗೆ ೨ ೩:5 |
ಕೊರಿಂಥಿಯರಿಗೆ ೨ ೩:6 |
ಕೊರಿಂಥಿಯರಿಗೆ ೨ ೩:7 |
ಕೊರಿಂಥಿಯರಿಗೆ ೨ ೩:8 |
ಕೊರಿಂಥಿಯರಿಗೆ ೨ ೩:9 |
ಕೊರಿಂಥಿಯರಿಗೆ ೨ ೩:10 |
ಕೊರಿಂಥಿಯರಿಗೆ ೨ ೩:11 |
ಕೊರಿಂಥಿಯರಿಗೆ ೨ ೩:12 |
ಕೊರಿಂಥಿಯರಿಗೆ ೨ ೩:13 |
ಕೊರಿಂಥಿಯರಿಗೆ ೨ ೩:14 |
ಕೊರಿಂಥಿಯರಿಗೆ ೨ ೩:15 |
ಕೊರಿಂಥಿಯರಿಗೆ ೨ ೩:16 |
ಕೊರಿಂಥಿಯರಿಗೆ ೨ ೩:17 |
ಕೊರಿಂಥಿಯರಿಗೆ ೨ ೩:18 |
|
|
|
|
|
|
ಕೊರಿಂಥಿಯರಿಗೆ ೨ 1 / ಕೊ೨ 1 |
ಕೊರಿಂಥಿಯರಿಗೆ ೨ 2 / ಕೊ೨ 2 |
ಕೊರಿಂಥಿಯರಿಗೆ ೨ 3 / ಕೊ೨ 3 |
ಕೊರಿಂಥಿಯರಿಗೆ ೨ 4 / ಕೊ೨ 4 |
ಕೊರಿಂಥಿಯರಿಗೆ ೨ 5 / ಕೊ೨ 5 |
ಕೊರಿಂಥಿಯರಿಗೆ ೨ 6 / ಕೊ೨ 6 |
ಕೊರಿಂಥಿಯರಿಗೆ ೨ 7 / ಕೊ೨ 7 |
ಕೊರಿಂಥಿಯರಿಗೆ ೨ 8 / ಕೊ೨ 8 |
ಕೊರಿಂಥಿಯರಿಗೆ ೨ 9 / ಕೊ೨ 9 |
ಕೊರಿಂಥಿಯರಿಗೆ ೨ 10 / ಕೊ೨ 10 |
ಕೊರಿಂಥಿಯರಿಗೆ ೨ 11 / ಕೊ೨ 11 |
ಕೊರಿಂಥಿಯರಿಗೆ ೨ 12 / ಕೊ೨ 12 |
ಕೊರಿಂಥಿಯರಿಗೆ ೨ 13 / ಕೊ೨ 13 |