A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಥೆಸೆಲೋನಿಯರಿಗೆ ೧ ೧



ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!
ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.
ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.
ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.
ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.
ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.
ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.
ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;
೧೦
ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.











ಥೆಸೆಲೋನಿಯರಿಗೆ ೧ ೧:1
ಥೆಸೆಲೋನಿಯರಿಗೆ ೧ ೧:2
ಥೆಸೆಲೋನಿಯರಿಗೆ ೧ ೧:3
ಥೆಸೆಲೋನಿಯರಿಗೆ ೧ ೧:4
ಥೆಸೆಲೋನಿಯರಿಗೆ ೧ ೧:5
ಥೆಸೆಲೋನಿಯರಿಗೆ ೧ ೧:6
ಥೆಸೆಲೋನಿಯರಿಗೆ ೧ ೧:7
ಥೆಸೆಲೋನಿಯರಿಗೆ ೧ ೧:8
ಥೆಸೆಲೋನಿಯರಿಗೆ ೧ ೧:9
ಥೆಸೆಲೋನಿಯರಿಗೆ ೧ ೧:10






ಥೆಸೆಲೋನಿಯರಿಗೆ ೧ 1 / ಥೆಸೆ೧ 1
ಥೆಸೆಲೋನಿಯರಿಗೆ ೧ 2 / ಥೆಸೆ೧ 2
ಥೆಸೆಲೋನಿಯರಿಗೆ ೧ 3 / ಥೆಸೆ೧ 3
ಥೆಸೆಲೋನಿಯರಿಗೆ ೧ 4 / ಥೆಸೆ೧ 4
ಥೆಸೆಲೋನಿಯರಿಗೆ ೧ 5 / ಥೆಸೆ೧ 5